ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಗಂಗಾಧರ ಬಿರ್ತಿ ಆಯ್ಕೆ

ಉಡುಪಿ, ಫೆ.5: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿಯಾಗಿ ಸವಿತಾ ಸಮಾಜದ ಹಿರಿಯ ಮುಖಂಡ ಹಾಗೂ ರಾಜ್ಯ ಜೆಡಿಎಸ್‌ನ ಜೊತೆ ಕಾರ್ಯದರ್ಶಿ ಗಂಗಾಧರ್ ಬಿರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಉಪಸ್ಥಿತಿಯಲ್ಲಿ ಉಡುಪಿ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಅಬ್ದುಲ್ ಖಾದರ್ ಕುಂಜಾರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಅಭ್ಯರ್ಥಿ ಸ್ಥಾನಕ್ಕೆ ಗಂಗಾಧರ ಬಿರ್ತಿ ಅವ ಹೆಸರನ್ನು ಖಾದರ್ ಸೂಚಿಸಿದರು.
ಪ್ರದೀಪ್ ಜಿ., ಬಾಲಕೃಷ್ಣ ಆಚಾರ್ಯ ಹಾಗೂ ಉಮೇಶ್ ಪೂಜಾರಿ ಅವರ ಅನುಮೋದನೆಯೊಂದಿಗೆ ಸಭೆಯಲ್ಲಿ ಗಂಗಾಧರ್ ಹೆಸರನ್ನು ಸರ್ವಾನು ಮತದಿಂದ ಕ್ಷೇತ್ರದ ಏಕೈಕ ಅಭ್ಯರ್ಥಿಯೆಂದು ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ವೀಕ್ಷಕ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಸಭೆಯಲ್ಲಿ ನಡೆದ ನಿರ್ಣಯವನ್ನು ಅಂಗೀಕರಿಸಿ ಉಡುಪಿ ಜಿಲ್ಲಾಧ್ಯಕ್ಷರಿಗೆ ನೀಡಲಾಯಿತು. ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಗಂಗಾಧರ್ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜಿಲ್ಲಾ ವಕ್ತಾ ಪ್ರದೀಪ್ ಜಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಅನಿತಾ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಅಶ್ರಫ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರಝಾಕ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರೋಹಿತ್ ಕರಂಬಳ್ಳಿ, ಜಿಲ್ಲಾ ಮಹಿಳಾ ಕಾರ್ಯಾಧ್ಯಕ್ಷೆ ದಿಲ್‌ಶಾದ್ ಮುಂತಾದವರು ಉಪಸ್ಥಿತರಿದ್ದರು.







