ಬಶೀರ್ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಮಂಗಳೂರು, ಫೆ. 5: ಆಕಾಶಭವನದ ನಿವಾಸಿ ಅಬ್ದುಲ್ ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಕೇಪು ಗ್ರಾಮದ ಅಭಿ ಯಾನೆ ಅಭಿಷೇಕ್ ಆರ್.ಎಸ್. (21) ಎಂಬಾತನನ್ನು ಕಾವೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿತ್ತು.
ಸೋಮವಾರ ಆರೋಪಿಯನ್ನು ಪೊಲೀಸರು ಪುತ್ತೂರಿನ ಬನ್ನೂರು ಎಂಬಲ್ಲಿಂದ ಬಂಧಿಸಿದ್ದಾರೆ. ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಕಾವೂರು ಪೊಲೀಸ್ ಠಾಣೆ ನಿರೀಕ್ಷಕ ಕೆ.ಆರ್.ನಾಯ್ಕೆ, ಸಿಬ್ಬಂದಿಗಳಾದ ಯಶವಂತ ಗೌಡ, ದುರ್ಗಾ ಪ್ರಸಾದ್ ಶೆಟ್ಟಿ, ವಿಶ್ವನಾಥ, ರಾಜಶೇಖರ ಗೌಡ, ಪ್ರಮೋದ್ ಎ.ಎಸ್., ಕೇಶವ, ಚೆರಿಯಾನ್, ರಶೀದ್ ಶೇಖ್, ವಿನಯ ಕುಮಾರ್ ಎಚ್.ಕೆ. ಅವರು ಪಾಲ್ಗೊಂಡಿದ್ದರು.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಪೊಲೀಸರು ಕಿಶನ್ ಪೂಜಾರಿ, ಶ್ರೀಜಿತ್, ಧನುಷ್ ಪೂಜಾರಿ, ಸಂದೇಶ್ ಕೋಟ್ಯಾನ್, ಪುಷ್ಪರಾಜ್ ಮತ್ತು ಲತೇಶ್ ಎಂಬವರನ್ನು ಬಂಧಿಸಿದ್ದರು.
Next Story





