ಮಿಜಾರು : ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

ಮಂಗಳೂರು, ಫೆ.6: ಮೂಡುಬಿದಿರೆ ಸಮೀಪದ ಪುತ್ತಿಗೆ ಗ್ರಾಮದ ಮಿಜಾರು ಎಂಬಲ್ಲಿ ಮಂಗಳವಾರ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಹಂಡೇಲು ನಿವಾಸಿ ಉಮರ್ ಎಂಬವರ ಪುತ್ರ ಯಾಸಿರ್ ಎಂದು ಗುರುತಿಸಲಾಗಿದೆ.
ವೃತ್ತಿಯಲ್ಲಿ ಪೈಂಟರ್ ಆಗಿರುವ ಯಾಸಿರ್ ರಾ.ಹೆ.169ರಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾದ ಸಂಭವಿಸಿದೆ. ಗಂಭೀರ ಗಾಯಗೊಂಡ ಯಾಸಿರ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story





