ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಹೈದರಾಬಾದ್,ಫೆ.6: ಬಿಟ್ಸ್ ಪಿಲಾನಿಯ ಹೈದರಾಬಾದ್ ಕ್ಯಾಂಪಸ್‌ನ ವಿದ್ಯಾರ್ಥಿಯೋರ್ವ ತನ್ನ ಹಾಸ್ಟೆಲ್ ಕೋಣೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ವಿಭಾಗದ ಮೂರನೇ ವರ್ಷದ ವಿದ್ಯಾರ್ಥಿ, ಚೆನ್ನೈ ಮೂಲದ ರಾಘವ ಶಾಂತಾರಾಮ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.
ಮೃತನ ಕೋಣೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ ಒಂದು ವಿಷಯದಲ್ಲಿ ಅನುತ್ತೀರ್ಣನಾಗಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದರು.
Next Story





