Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ...

ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಪ್ರಧಾನಿ ಜೊತೆಗೆ ಮಾತುಕತೆ ನಡೆಸುತ್ತೇನೆ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ6 Feb 2018 8:01 PM IST
share
ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಪ್ರಧಾನಿ ಜೊತೆಗೆ ಮಾತುಕತೆ ನಡೆಸುತ್ತೇನೆ: ಎಚ್.ಡಿ.ದೇವೇಗೌಡ

ಬೆಂಗಳೂರು, ಫೆ.6: ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿ ಸಂಬಂಧ ಮಾತುಕತೆ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೇಳಿದ್ದು, ಅನುಮತಿ ಸಿಕ್ಕ ಕೂಡಲೇ ಹೊಸದಿಲ್ಲಿಗೆ ತೆರಳಿ ಮಾತುಕತೆ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಹೈಕೋರ್ಟ್ ಮುಂಭಾಗದ ಗೋಲ್ಡನ್ ಜ್ಯುಬಿಲಿ ದ್ವಾರದಲ್ಲಿ ವಕೀಲರ ಸಂಘ ನಡೆಸುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಸ್ಥಳ್ಕಕೆ ಅವರು ಭೇಟಿ ನೀಡಿ ವಕೀಲರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಧರಣಿ ನಿರತ ವಕೀಲರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ, ಫೋನ್ ಮೂಲಕ ಸಮಸ್ಯೆ ಪರಿಹರಿಸುವ ಕಾಲ ಹೋಗಿದೆ. ಪಿ.ವಿ.ನರಸಿಂಹರಾವ್ ಪ್ರಧಾನಿಯಾಗಿದ್ದಾಗ ಫೋನ್ ಮೂಲಕ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಿದ್ದೆ. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ, ಖುದ್ದಾಗಿ ಭೇಟಿ ಮಾಡಿಯೇ ಮಾತುಕತೆ ನಡೆಸಬೇಕು. ಹೀಗಾಗಿ, ಭೇಟಿಗೆ ಸಮಯಾವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದೇನೆ. ಇಂದು ಸಮಯ ನೀಡಿದರೂ ಸರಿ, ನಾಳೆ ನೀಡಿದರೂ ಸರಿ, ನಾನು ಹೊಸದಿಲ್ಲಿಗೆ ತೆರಳಿ ನ್ಯಾಯಮೂರ್ತಿಗಳ ನೇಮಕ ಸಂಬಂಧ ಮಾತುಕತೆ ನಡೆಸುತ್ತೇನೆ ಎಂದರು.

ರಾಷ್ಟ್ರಪತಿಗಳು ಬೆಂಗಳೂರಿಗೆ ಬರುತ್ತಿದ್ದಾರೆ. ನಾನು ಕೂಡ ರಾಷ್ಟ್ರಪತಿಗಳಿಗೆ ಮನವಿ ಪತ್ರ ನೀಡಲಿದ್ದೇನೆ. ರಾಷ್ಟ್ರಪತಿಗಳೊಂದಿಗೆ ಉತ್ತಮ ಬಾಂಧವ್ಯ ಇದೆ. ನೀವು ಒಂದು ಮನವಿ ಪತ್ರ ಕೊಡಿ, ಸಮಸ್ಯೆ ಪರಿಹಾರಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಸುತ್ತೇನೆ. ಇದರಲ್ಲಿ ನಾನು ರಾಜಕೀಯ ಲಾಭವನ್ನು ನೋಡುವುದಿಲ್ಲ, ಯಾರು ಬೇಕಾದರೂ ಲಾಭ ತೆಗೆದುಕೊಳ್ಳಲಿ. ನಾನು ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ನಡೆಸುತ್ತೇನೆ ಎಂದು ದೇವೇಗೌಡ ಸ್ಪಷ್ಟಪಡಿಸಿದರು.

ಈಗ ನ್ಯಾಯಮೂರ್ತಿಗಳ ಕೊರತೆಯಿಂದ ಸಮಸ್ಯೆ ತೀವ್ರವಾಗಿದೆ. ಜನಸಾಮಾನ್ಯರಿಗೆ ಹಿಂಸೆಯಾಗಿದೆ, ಹೈಕೋರ್ಟ್‌ನ ಹಿರಿಯ ಮತ್ತು ಕಿರಿಯ ವಕೀಲರು ಒಟ್ಟಾಗಿ ಎಲ್ಲರೂ ಧರಣಿಯಲ್ಲಿ ಭಾಗಿಯಾಗಿರುವುದು ಇದೇ ಮೊದಲು. ನಿವೃತ್ತ ನ್ಯಾಯಮೂರ್ತಿಗಳು ಕೂಡ ಭಾಗಿಯಾಗಿರುವುದು ಪರಿಸ್ಥಿತಿಯ ಗಂಭೀರತೆ ತೋರಿಸಿದೆ ಎಂದರು.

ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಇನ್ನೆರಡು ದಿನದಲ್ಲಿ ಪ್ರಾರಂಭಿಸದಿದ್ದರೆ, ನಾನು ಕೂಡ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತೇನೆ.
-ವಿ.ಗೋಪಾಲಗೌಡ, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X