ಅಪಘಾತ: ಪೊಲೀಸ್ ಸಿಬ್ಬಂದಿಗೆ ಗಾಯ
ಹೆಬ್ರಿ, ಫೆ.6: ಇಲ್ಲಿನ ಜರುವತ್ತು ಎಂಬಲ್ಲಿ ಫೆ.5ರಂದು ಬೆಳಗ್ಗೆ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಅಜೆಕಾರು ಪೊಲೀಸ್ ಠಾಣಾ ಸಿಬ್ಬಂದಿ ಸತೀಶ್ ಎಂಬವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮುದ್ರಾಡಿಯಿಂದ ಹೆಬ್ರಿ ಕಡೆ ಹೋಗುತ್ತಿದ್ದ ಬಲೆನೋ ಕಾರು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಇದರಿಂದ ಪೊಲೀಸ್ ಸಿಬ್ಬಂದಿ ಸತೀಶ ಬೈಕ್ ಸಮೇತ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





