Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: 5ನೇ ತಾಲೂಕು ಸಾಹಿತ್ಯ ಸಮ್ಮೇಳನ

ಹನೂರು: 5ನೇ ತಾಲೂಕು ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ6 Feb 2018 10:30 PM IST
share
ಹನೂರು: 5ನೇ ತಾಲೂಕು ಸಾಹಿತ್ಯ ಸಮ್ಮೇಳನ

ಹನೂರು,ಫೆ.06: ವಿಶ್ವದ ಬೃಹತ್ ಕಾವ್ಯಗಳಲ್ಲೊಂದಾದ ಇಂಗ್ಲೆಂಡ್‍ನ ಕಾಲೇವಾಲ ಮಹಾಗ್ರಂಥವನ್ನೇ ಮೀರಿಸುವಂತಹ ಮಹಾನ್ ಗ್ರಂಥ ನಮ್ಮ ಮಲೆ ಮಹದೇಶ್ವರರ ಜಾನಪದ ಕಾವ್ಯ ಎಂದು ಜಾನಪದ ವಿದ್ವಾಂಸ ಪಿ.ಕೆ.ರಾಜಶೇಖರ್ ಅಭಿಪ್ರಾಯಪಟ್ಟರು.

ಪಟ್ಟಣದ ವಾಸವಿಮಹಲ್ ಕಲ್ಯಾಣ ಮಂಟಪದ ಮೀಣ್ಯ ಗುರುಸಿದ್ದ ಕವಿ ವೇದಿಕೆಯಲ್ಲಿ ಕಸಾಪ ಕೊಳ್ಳೇಗಾಲ ಮತ್ತು ಹನೂರು ವಲಯದ ವತಿಯಿಂದ ಏರ್ಪಡಿಸಲಾಗಿದ್ದ 5ನೇ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪಿ.ಕೆ.ರಾಜಶೇಖರ್, ಕೊಳ್ಳೇಗಾಲ ತಾಲೂಕು ಕರ್ನಾಟಕದಲ್ಲಿಯೇ ಅತ್ಯಂತ ಸಂಪದ್ಭರಿತವಾಧ ಜಾಣಪದ ಕಲೆಯನ್ನು ಹೊಂದಿದೆ. ಇಲ್ಲಿ ಜೈನ, ಶೈವ, ಜಾನಪದ, ಇಸ್ಲಾಂ ಮತ್ತು ಕ್ರೈಸ್ತ ಧರ್ಮದವರೆಲ್ಲರೂ ವಾಸಿಸುತ್ತಾರೆ. ಸರ್ವ ಧರ್ಮಗಳ ಕೇಂದ್ರವಾಗಿರುವ ಇಲ್ಲಿ ಯಾವುದೇ ಜಾತಿ ಮತಗಳ ಸಂಘರ್ಷವಿಲ್ಲದೆ, ಶಾಂತಿ ಸಹಬಾಳ್ವೆಯಿಂದ, ಸಮನ್ವಯತೆಯೊಂದಿಗೆ ಬಾಳ್ವೆ ನಡೆಸುತ್ತಿದ್ದಾರೆ. ಇದೊಂದು ಸುಸಂಸ್ಕೃತ ತಾಲೂಕು ಎಂದು ಬಣ್ಣಿಸಿದರು.

ಜಾನಪದ ವಿಶ್ವವಿದ್ಯಾನಿಲಯಕ್ಕೆ ಒತ್ತಾಯ: ಕರ್ನಾಟಕ ರಾಜ್ಯದಲ್ಲಿ ಜಾಣಪದ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಿ ಈ ನಾಡಿನ ಜಾನಪದ ಕಲೆಯನ್ನು ಉಳಿಸಬೇಕೆನ್ನುವ ಕೂಗು ಕೇಳಿಬಂದಾಗ, ವಿಶ್ವವಿದ್ಯಾನಿಲಯ ತೆರೆಯುವುದಾದರೆ ಚಾಮರಾಜನಗರ ಜಿಲ್ಲೆಯಲ್ಲಿಯೇ ಪ್ರಾರಂಭಿಸಬೇಕು ಎನ್ನುವ ವಾದವನ್ನು ಹಲವಾರು ಜಾನಪದ ವಿದ್ವಾಂಸರು ಮಂಡಿಸಿದರು. ಆದರೂ ಅನಿವಾರ್ಯ ಕಾರಣಗಳಿಂದಾಗಿ ವಿಶ್ವವಿದ್ಯಾನಿಲಯವನ್ನು ಹಾವೇರಿಯಲ್ಲಿ ಪ್ರಾರಂಭಿಸಲಾಯಿತು ಎಂದು ತಿಳಿಸಿದರು.

ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ: ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ವೀರಗಾಸೆಕುಣಿತ, ಡೊಳ್ಳುಕುಣಿತ, ತೊಗಲುಗೊಂಬೆಯಾಟ, ಸೋಲಿಗರಕುಣಿತ, ಲಂಬಾಣಿ ಕುಣಿತ, ಬುಡಕಟ್ಟು ಜನಾಂಗಗಳ ವಿಶಿಷ್ಠ ಕುಣಿತಗಳು, ಗೊರವರ ಕುಣಿತ, ವೀರ ಮಕ್ಕಳ ಕುಣಿತ, ನಂದಿ ಧ್ವಜ ಕುಣಿತ, ಬೀಸುಕಂಸಾಳೆ, ಕತ್ತಿ ವರಸೆ, ದೊಣ್ಣೆ ವರಸೆ, ಮಾರಿ ಕುಣಿತ, ಕೋಲಾಟ, ಕಾಡೆಮ್ಮೆ ದೊಡ್ಡು ಕುಣಿತ, ಸೂತ್ರದ ಗೊಂಬೆಯಾಟಗಳಂತಹ ವಿಶಿಷ್ಟವಾದ ಜಾನಪದ ಕಲೆಗಳಿದ್ದು, ಇದನ್ನು ಉಳಿಸಿ ಬೆಳೆಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಎಲ್ಲಾ ಕಲಾವಿದರುಗಳನ್ನು ಗುರುತಿಸಿ ಅವರನ್ನು ಬೆಂಬಲಿಸಿಬೇಕಾದಂತಹ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದ್ದು, ಮತ್ತಷ್ಟು ಕಾರ್ಯಪ್ರವೃತ್ತರಾಗಿ ನಮ್ಮ ಮುಂದಿನ ಪೀಳಿಗೆಗೂ ಜಾನಪದ ಕಲೆಯನ್ನು ಉಳಿಸಬೇಕು ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ವಿನಯ್ ಮಾತನಾಡಿ, ಕತ್ತಲ ರಾಜ್ಯ ಎಂದು ಕರೆಯಲ್ಪಡುತ್ತಿದ್ದ ಚಾಮರಾಜನಗರ ಜಿಲ್ಲೆ ಜಾನಪದ ಸಾಹಿತ್ಯದ ತವರೂರಾಗಿದೆ. ಈ ನಾಡಿದ ಕುಲದೈವ ಮಲೆ ಮಹದೇಶ್ವರರು ಕೇವಲ ದೇವಮಾನವರಾಗಿರದೆ ಸಾಂಸ್ಕೃತಿಕ ರಾಯಭಾರಿಯಾಗಿದ್ದರು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ವಿಶ್ವದಲ್ಲೇ ಅತಿ ಹೆಚ್ಚು ಆಜೀವ ಸದಸ್ಯತ್ವ ಹೊಂದಿರುವ ಸಂಸ್ಥೆಯಾಗಿದ್ದು, ಇದು 4ಲಕ್ಷ ಸದಸ್ಯರನ್ನು ಹೊಂದಿದೆ. ಮೈಸೂರು ಜಿಲ್ಲೆಯಿಂದ ವಿಭಜನೆಗೊಂಡಾಗ ಚಾಮರಾಜನಗರ ಜಿಲ್ಲೆಯಲ್ಲಿ 78 ಜನ ಸದಸ್ಯರಿದ್ದರು. ಬಳಿಕ ಹಂತ ಹಂತವಾಗಿ ಸದಸ್ಯತ್ವವನ್ನು ನೀಡಲಾಗುತ್ತಿದ್ದು, ಇದೀಗ ಸದಸ್ಯತ್ವದ ಸಂಖ್ಯೆ 5ಸಾವಿರ ದಾಟಿದೆ. ಆದರೆ ಹನೂರು ಭಾಗದಲ್ಲಿ ಸದಸ್ಯತ್ವ ಕಡಿಮೆಯಿದೆ. ಹನೂರು ಪಟ್ಟಣವು ನೂತನ ತಾಲೂಕು ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಇಲ್ಲಿಯೂ ಹೆಚ್ಚಿನ ಸದಸ್ಯತ್ವವನ್ನು ನೀಡಿ ಒಂದು ಮತಕೇಂದ್ರವನ್ನು ತೆರೆಯಬೇಕೆಂಬ ಗುರಿಯಿದೆ. ಆದುದರಿಂದ ಸಾಹಿತ್ಯ ಪ್ರೇಮಿಗಳು, ಕನ್ನಡ ಅಭಿಮಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ನಾಗರಾಜು, ಸಾಲೂರು ಬೃಹನ್ಮಠದ ಪಟ್ಟದಗುರುಸ್ವಾಮಿಗಳು, ಜಿ.ಪಂ ಸದಸ್ಯರಾದ ಮರುಗದಮಣಿ, ಇಷರತ್‍ಭಾನು, ಲೇಖಾರವೀಂದ್ರ, ಮುಳ್ಳೂರು ಕಮಲ್, ಪ.ಪಂ ಅಧ್ಯಕ್ಷೆ ಮಮತಾ ಮಹಾದೇವು, ಸದಸ್ಯ ಬಾಲರಾಜ್‍ನಾಯ್ಡು,  ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ಕಸಾಪ ತಾಲೂಕು ಅಧ್ಯಕ್ಷ ನಂಜುಂಡಸ್ವಾಮಿ, ವಲಯ ಅಧ್ಯಕ್ಷ ಶ್ರೀನಿವಾಸ್‍ನಾಯ್ಡು, ಪದಾಧಿಕಾರಿಗಳಾದ ಗುರುಸ್ವಾಮಿ, ಆಶೋಕ್ ,ಈರೇಂದ್ರ , ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X