Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎನ್‌ಎಂಪಿಟಿ ಶಿಪ್ಪಿಂಗ್...

ಮಂಗಳೂರು: ಎನ್‌ಎಂಪಿಟಿ ಶಿಪ್ಪಿಂಗ್ ಕಂಪೆನಿ ಕಾರ್ಮಿಕರ ಮುಷ್ಕರ ಅಂತ್ಯ

ಕೇಂದ್ರ ಕಾರ್ಮಿಕ ವಿಭಾಗದ ಉಪಾಯುಕ್ತರ ಸಂಧಾನ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ6 Feb 2018 10:47 PM IST
share

ಮಂಗಳೂರು, ಫೆ. 6: ಕನಿಷ್ಠ ವೇತನ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಸಿಸಿಟಿಯು ಮತ್ತು ಅಖಿಲ ಭಾರತ ಬಂದರು ಕಾರ್ಮಿಕರ ಒಕ್ಕೂಟದ ಸಹಭಾಗಿತ್ವದಲ್ಲಿ ಜ.29ರಿಂದ ಎನ್‌ಎಂಪಿಟಿ ಪ್ರವೇಶ ದ್ವಾರದ ಮುಂದೆ ನಡೆಸಲಾಗುತ್ತಿದ್ದ ಶಿಪ್ಪಿಂಗ್ ಕಂಪೆನಿ ಕಾರ್ಮಿಕರ ಮುಷ್ಕರ ಮಂಗಳವಾರ ಅಂತ್ಯಗೊಂಡಿದೆ.

ಕೇಂದ್ರ ಕಾರ್ಮಿಕ ವಿಭಾಗದ ಉಪಾಯುಕ್ತರು ಮಂಗಳವಾರ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿ ಕಾರ್ಮಿಕ ಮುಖಂಡರ ಜೊತೆ ಸಮಾಲೊಚನೆ ನಡೆಸಿದ್ದರು.

ನೌಕರರಿಗೆ ಸಕಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ವೇತನ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಬೇಕು, ಪ್ರತಿಭಟನೆಯಲ್ಲಿ ಪಾಲ್ಗೊಂಡ ನೌಕರರ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು, ಅವರ ಕೆಲಸದ ಸ್ಥಿತಿಯಲ್ಲಿ ಬದಲಾವಣೆ ಮಾಡಬಾರದು, ನೌಕರರಿಗೆ ನೀಡಲಾಗಿದ್ದ ನೊಟೀಸ್‌ಗಳನ್ನು ಬೇಷರತ್ ವಾಪಸ್ ಪಡೆದುಕೊಳ್ಳಬೇಕು ಮತ್ತು ಅವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಉಪಾಯುಕ್ತರು ಶಿಪ್ಪಿಂಗ್ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಿದರು. ಆ ಹಿನ್ನೆಲೆಯಲ್ಲಿ ನೌಕರರು ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

ನೌಕರರು ಕೂಡಾ ಸಂಸ್ಥೆಯ ನೀತಿ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಉಪಾಯುಕ್ತರು ಕಿವಿ ಮಾತಿದ್ದಾರೆ. ಶಿಪ್ಪಿಂಗ್ ಕಂಪೆನಿಯ ಎಲ್ಲ ಕಾರ್ಮಿಕ ರಿಗೂ ಕೇಂದ್ರ ಸರಕಾರ ಜಾರಿಗೊಳಿಸಿರುವ ಕನಿಷ್ಠ ವೇತನ ದೊರೆಯಬೇಕು, ಹೆಚ್ಚುವರಿ ಕೆಲಸಕ್ಕೆ ಗಂಟೆಗೆ ತಲಾ 150 ರೂ. ನೀಡಬೇಕು, ಪ್ರತಿ ವರ್ಷ ಕನಿಷ್ಠ ವೇತನದ ಶೇ.20 ಬೋನಸ್ ನೀಡಬೇಕು, ಬಂದರಿನ ನೇರ ಕಾರ್ಮಿಕರಿಗೆ ಸಿಗುವಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಎಲ್ಲ ಕಾರ್ಮಿಕರ ಕೆಲಸವನ್ನು ಖಾಯಂಗೊಳಿಸಬೇಕು, ಸುಳ್ಳು ಕಾರಣ ನೀಡಿ ಕೆಲಸದಿಂದ ವಜಾ ಮಾಡಬಾರದು ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್‌ಎಂಪಿಟಿ ಶಿಪ್ಪಿಂಗ್ ಕಂಪೆನಿಯ ಸಾವಿರಕ್ಕೂ ಅಧಿಕ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದರು. 

ಶಿಪ್ಪಿಂಗ್ ಕಂಪೆನಿಗಳ ಕಾರ್ಮಿಕರು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಎನ್‌ಎಂಪಿಟಿ ಇತಿಹಾಸದಲ್ಲಿ ಈ ಮೊದಲ ಬಾರಿಗೆ ಮುಷ್ಕರ ನಡೆಸಿದ್ದರು. ಇದಕ್ಕೂ ಮುನ್ನ ಎನ್‌ಎಂಪಿಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಜಾಥಾ ನಡೆಸಿ ಗಮನ ಸೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X