3 ವರ್ಷದ ಮಗುವಿನ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಮೈಸೂರು,ಫೆ.6: 3ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಫೋಕ್ಸೋ ವಿಶೇಷ ನ್ಯಾಯಾಲಯ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ದೊಡ್ಡಹೈದ(29) ಅತ್ಯಾಚಾರ ಆರೋಪಿಯಾಗಿದ್ದು, 2017ರ ಜನವರಿ 30ರಂದು ಹೆಚ್.ಡಿ.ಕೋಟೆ ತಾಲೂಕಿನ ಹಾಡಿಯೊಂದರಲ್ಲಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ
ಮಗುವಿನ ತಾಯಿಯ ದೂರದ ಸಂಬಂಧಿಯಾಗಿರುವ ಈತ ಆಟವಾಡಿಸುವ ನೆಪದಲ್ಲಿ ಮಗುವನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಮಗುವಿನ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡ ಮಹಿಳೆಯೋರ್ವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ವೈದ್ಯಕೀಯ ವರದಿ ಕೂಡ ಅತ್ಯಾಚಾರವನ್ನು ದೃಢಪಡಿಸಿತ್ತು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಸಿ.ಶಿವರುದ್ರಸ್ವಾಮಿ ಮಾಹಿತಿ ನೀಡಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಂ.ಪಾವಲೆ ಆರೋಪಿಗೆ ಹತ್ತು ವರ್ಷ ಕಠಿಣ ಜೈಲುಶಿಕ್ಷೆ ಮತ್ತು ಹತ್ತು ಸಾವಿರ ರೂ.ದಂಡ ವಿಧಿಸಿ ಆದೇಶ ನೀಡಿದ್ದಾರೆ.
Next Story





