Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಆಕಾಶದ ಕೌತುಕ ಬಿಚ್ಚಿಡುವ ಕೃತಿ

ಆಕಾಶದ ಕೌತುಕ ಬಿಚ್ಚಿಡುವ ಕೃತಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ7 Feb 2018 12:12 AM IST
share
ಆಕಾಶದ ಕೌತುಕ ಬಿಚ್ಚಿಡುವ ಕೃತಿ

ಆಕಾಶವೆನ್ನುವುದು ಹಲವು ನಿಗೂಢಗಳ ಆಗರ. ರಾತ್ರಿಯಲ್ಲಿ ತಣ್ಣಗೆ ಚಂದ್ರ ಮತ್ತು ನಕ್ಷತ್ರಗಳ ನಡುವೆ ಆಕಾಶ ಕಂಗೊಳಿಸುತ್ತಿರುತ್ತದೆ. ಆದರೆ ಅದರ ಆಳವನ್ನು ಶೋಧಿಸುತ್ತಾ ಹೋದಂತೆಯೇ ಅನಂತಾನಂತ ವಿಸ್ಮಯಗಳು ತೆರೆದುಕೊಳ್ಳುತ್ತಾ ಹೋಗುತ್ತದೆ. ಆದರೆ ತೆರೆದಷ್ಟೂ ಮುಗಿಯದ ವಿಸ್ಮಯಗಳವು. ಆಕಾಶದ ನಿಗೂಢತೆಯ ಕಾರಣದಿಂದಾಗಿಯೇ ಅದನ್ನು ಹಲವರು ದುರ್ಬಳಕೆ ಮಾಡುತ್ತಾ ಬಂದಿದ್ದಾರೆ. ಗ್ರಹಗಳನ್ನು ಮುಂದಿಟ್ಟುಕೊಂಡು ಜನರನ್ನು ಶೋಷಿಸುತ್ತಾ ಬಂದಿದ್ದಾರೆ. ರಾಹು-ಕೇತು ಎಂದೆಲ್ಲ ಕತೆಗಳು ಸೃಷ್ಟಿಯಾಗಿ ಜನರು ಮೂರ್ಖರಾಗುತ್ತಿದ್ದಾರೆ. ಇತ್ತೀಚೆಗೆ ಗ್ರಹಣ ಸಂಭವಿಸಿದಾಗ ಹೇಗೆ ಜ್ಯೋತಿಷಿಗಳು ಜನರನ್ನು ಶೋಷಿಸಿದರು ಎನ್ನುವುದನ್ನು ನಾವು ನೋಡಿದ್ದೇವೆ. ಈ ಹಿನ್ನೆಲೆಯಲ್ಲಿ ಜನರ ವೌಢ್ಯವನ್ನು ಅಳಿಸುವ ಹಾಗೆಯೇ ಆಕಾಶದ ನಿಗೂಢಗಳನ್ನು ಸರಳವಾಗಿ ತೆರೆದಿಡುವ ಕೃತಿಯಾಗಿ ಸರೋಜ ಪ್ರಕಾಶ ಬರೆದಿರುವ ‘ಬಾನಲ್ಲಿ ಗ್ರಹ ಗಣತಿ’ ಮುಖ್ಯವಾಗುತ್ತದೆ. ಇದೊಂದು ಬಿಡಿ ಲೇಖನಗಳ ಸಂಗ್ರಹ. ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಬಡಿ ಬಿಡಿಯಾಗಿ ಪ್ರಕಟಗೊಂಡ ಲೇಖನಗಳನ್ನು ಇಲ್ಲಿ ಒಟ್ಟು ಸೇರಿಸಲಾಗಿದೆ. ಮೂಲ ಲೇಖನಗಳಿಗೆ ಇನ್ನಷ್ಟು ವಿವರಗಳನ್ನು ಸೇರಿಸಿ ಪುಸ್ತಕ ಮಾಡಲಾಗಿದೆ. ಇಲ್ಲಿರುವ ಎಲ್ಲ ಬರಹಗಳೂ ಕಥನ ರೂಪದಲ್ಲಿವೆ. ಬರೇ ವಿವರಗಳನ್ನು ಹೇಳುವ ಒಣ ಲೇಖನವಾಗದೆ ಅದನ್ನು ಆಕರ್ಷಕವಾಗಿ ನಿರೂಪಿಸಿದ್ದಾರೆ. ಆದುದರಿಂದ ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ್ದಾದರೂ ಕುತೂಹಲಕಾರಿ ಮಾಹಿತಿಗಳಿಂದ ನಮ್ಮನ್ನು ಸೆಳೆಯುತ್ತದೆ. ಧೂಮಕೇತುವಿನ ಕುರಿತಂತೆ ಇರುವ ವೌಢ್ಯ, ತಪ್ಪು ಕಲ್ಪನೆ ಇವುಗಳನ್ನು ಹೇಳುವ ‘ಧೂಮಕೇತುವಿನ ನೆತ್ತಿಗೆ ಸುತ್ತಿಗೆ’, ಮಂಗಳನ ಒಡಲನ್ನು ತೆರೆದಿಡುವ ‘ಮಂಗಳನ ಮಡಿಲಲ್ಲಿ ಅವಳಿ ರೊಬಾಟುಗಳು’, ಫ್ಲೂಟೋದ ರಹಸ್ಯಗಳನ್ನು ಹೊರತೆಗೆಯಲು ವಿಜ್ಞಾನಿಗಳು ನಡೆಸುತ್ತಿರುವ ಸಾಹಸಗಳು, ಹೊಸ ಅಂತರಿಕ್ಷಯುಗಕ್ಕೆ ನಾಂದಿ ಹಾಡಿದ ಪುಟಾಣಿ ಗಗನ ನೌಕೆ ಸ್ಮಾರ್ಟ್-1, ಮಂಗಳನೆಡೆಗೆ ಹಾರಿದ ಫೀನಿಕ್ಸ್‌ನ ವಿವರಗಳು, ಭೂಮಿಯನ್ನು ಚಂದ್ರ ಮಾತ್ರವಲ್ಲ ಇನ್ನೊಬ್ಬ ಕಳ್ಳ ಚಂದ್ರ ಗುಟ್ಟಾಗಿ ಸುತ್ತಿತ್ತಿರುವ ಬಗೆ, ಜನಗಣತಿಯಂತೆ ಬಾನಲ್ಲಿನ ಗ್ರಹಗಣತಿ, ಕ್ಷುದ್ರಗ್ರಹಗಳ ಅಧ್ಯಯನಕ್ಕೆ ಬಳಸುವ ಡಾನ್ ಶೋಧನೌಕೆ ಹೀಗೆ ಆಕಾಶದಲ್ಲಿ ನಡೆಯುತ್ತಿರುವ ಸಂಶೋಧನೆಗಳ ಬೇರೆ ಬೇರೆ ಆಯಾಮಗಳನ್ನು ಈ ಕೃತಿ ತೆರೆದಿಡುತ್ತದೆ. ಆಕಾಶದ ಕುರಿತಂತೆ ಇನ್ನಷ್ಟು ತಿಳಿದುಕೊಳ್ಳಲು ಈ ಕೃತಿ ನಿಮ್ಮನ್ನು ಸಜ್ಜುಗೊಳಿಸುವುದರಲ್ಲಿ ಅನುಮಾನವಿಲ್ಲ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 130 ರೂಪಾಯಿ.


share
-ಕಾರುಣ್ಯಾ
-ಕಾರುಣ್ಯಾ
Next Story
X