Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕಾರಣದಲ್ಲಿ ಭಾಷೆ ಬಳಕೆಯ ಮೇಲೆ ನಿಗಾ...

ರಾಜಕಾರಣದಲ್ಲಿ ಭಾಷೆ ಬಳಕೆಯ ಮೇಲೆ ನಿಗಾ ಇರಬೇಕು: ಸಚಿವೆ ಉಮಾಶ್ರಿ

ವಾರ್ತಾಭಾರತಿವಾರ್ತಾಭಾರತಿ7 Feb 2018 11:29 PM IST
share
ರಾಜಕಾರಣದಲ್ಲಿ ಭಾಷೆ ಬಳಕೆಯ ಮೇಲೆ ನಿಗಾ ಇರಬೇಕು: ಸಚಿವೆ ಉಮಾಶ್ರಿ

ಶಿವಮೊಗ್ಗ, ಫೆ. 7: ಯಾರೇ ಆಗಲಿ ರಾಜಕಾರಣದಲ್ಲಿ ಭಾಷೆ ಬಳಸುವಾಗ ಎಚ್ಚರಿಕೆಯಿಂದಿರಬೇಕು. ಎಡವಬಾರದು. ಆರೋಪ-ಪ್ರತ್ಯಾರೋಪ ಸಹಜವಾದರೂ ಭಾಷಾ ಪ್ರಯೋಗ ಇತಿಮಿತಿ ದಾಟಬಾರದು. ಸಾರ್ವಜನಿಕರು ನಮ್ಮನ್ನು ಗಮನಿಸುತ್ತಾರೆಂಬ ಅರಿವು ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಅಭಿಪ್ರಾಯಪಟ್ಟಿದ್ದಾರೆ. 

ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಚಿತ್ರನಟಿ ರಮ್ಯ ಹಾಗೂ ನಟ ಜಗ್ಗೇಶ್‍ರವರ ಟ್ವಿಟರ್ ಸಮರದ ಕುರಿತಂತೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. 

ಸಿನಿಮಾ ಮತ್ತು ರಾಜಕಾರಣ ಬೇರೆ ಕ್ಷೇತ್ರಗಳಾಗಿವೆ. ಸಿನಿಮಾ ಪಾತ್ರಗಳ ಮೂಲಕ ಜನರು ನಮ್ಮನ್ನು ಗುರುತಿಸುತ್ತಾರೆ. ಹಾಗೆಯೇ ರಾಜಕಾರಣಿಯಾದಾಗಲೂ ಗುರುತಿಸುತ್ತಾರೆ. ಆದರೆ ಯಾವುದೇ ಕ್ಷೇತ್ರವಿರಲಿ ಭಾಷೆ ಪ್ರಯೋಗದ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದ್ದಾರೆ. 

ಸರಿಯಲ್ಲ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದಾಗಿದೆ. ಇದರಲ್ಲಿ ಯಾವುದೇ ಹುರುಳಿಲ್ಲ. 'ಪರ್ಸೆಂಟೆಜ್', 'ನಂಗನಾಚ್'ನಂತಹ ಪದಗಳು ಪ್ರಧಾನಿಯವರ ಬಾಯಲ್ಲಿ ಬಂದಿರುವುದು ನಿಜಕ್ಕೂ ಸರಿಯಲ್ಲ. ಈ ರೀತಿಯ ಭಾಷೆ ಬಳಕೆ ಮಾಡಿರುವುದು ಅವರ ಹುದ್ದೆಗೆ ಶೋಭೆ ತರುವುದಿಲ್ಲ. ಸರ್ಕಾರದ ವಿರುದ್ದ ಅವರು ಮಾಡಿರುವ ಆರೋಪಗಳ ಬಗ್ಗೆ ದಾಖಲೆಗಳಿದ್ದರೆ ಅವರು ಬಹಿರಂಗಪಡಿಸಲಿ. ಇಲ್ಲ ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಲಿ ಎಂದರು. 

ಧ್ವಜ: ಸರ್ವ ಸಮ್ಮತ ಅಭಿಪ್ರಾಯ ಪಡೆದು ಪ್ರತ್ಯೇಕ ನಾಡ ಧ್ವಜ ರೂಪಣೆಗೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ಮಾಡಿರುವ ಶಿಫಾರಸ್ಸುಗಳು ಏನೆಂಬುವುದು ಗೊತ್ತಿಲ್ಲ. ಈ ಕುರಿತಂತೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಈ ಬಗ್ಗೆ ಚರ್ಚೆ ನಡೆಸಿದ ನಂತರ ಪ್ರತಿಕ್ರಿಯೆ ನೀಡುತ್ತೆನೆ. ಈಗ ಏನೇ ಹೇಳಿದರೂ ಅದು ಅರೆಬೆಂದ ಹೇಳಿಕೆಯಾಗುತ್ತದೆ ಎಂದರು. 

ನಾಟಕ ಅಕಾಡೆಮಿಯ ಲೋಗೋ ಬದಲಾವಣೆ ಮಾಡಿಲ್ಲ. ಫಲಕದ ವಿನ್ಯಾಸ ಬದಲಾಯಿಸಲಾಗಿದೆ. ಸಾಕಷ್ಟು ಬಾರಿ ಫಲಕದ ವಿನ್ಯಾಸ ಬದಲಾವಣೆ ಮಾಡಿದ ಊದಾಹರಣೆಯಿದೆ. ವಹಿಸಿದ ಖಾತೆಗಳ ಸಮರ್ಥ ನಿಭಾವಣೆ ಮಾಡಿದ್ದೆನೆ. ಎರಡೂ ಇಲಾಖೆಗಳಿಂದ ಅನೇಕ ಕಾರ್ಯಕ್ರಮ ರೂಪಿಸಿ ಕಾರ್ಯಗತಗೊಳಿಸಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. 

ತೇರದಾಳ ಕ್ಷೇತ್ರದಿಂದ ಸ್ಪರ್ಧೆ
ಕಳೆದ ಎರಡು ಬಾರಿಯಿಂದ ತೇರದಾಳ ವಿಧಾನಸಭಾ ಕ್ಷೇತ್ರದಿಂದ ನಾನು ಕಣಕ್ಕಿಳಿದಿದ್ದೇನೆ. ಮುಂದಿನ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಮತದಾರರು ಬೆಂಬಲ ವ್ಯಕ್ತಪಡಿಸುವ ವಿಶ್ವಾಸವಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X