ಮೆಟ್ರೋನಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ: ಕೆ.ಜೆ.ಜಾರ್ಜ್ ಭರವಸೆ

ಬೆಂಗಳೂರು, ಫೆ.8: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್)ದಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಗುರುವಾರ ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಆರ್.ಚೌಡರೆಡ್ಡಿ ತೂಪಲ್ಲಿ ಅವರು ಬಿಎಂಆರ್‌ಸಿಎಲ್‌ನಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಕನ್ನಡಿಗರ ಮೇಲೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕೆಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಎಂಆರ್‌ಸಿಎಲ್‌ಯಲ್ಲಿ ಕಾರ್ಯಾಚರಣೆ, ನಿರ್ವಹಣೆ ಮತ್ತು ಮಾನವ ಸಂಪನ್ಮೂಲ ಎಂಬ ಮೂರು ವಿಭಾಗಗಳಿದ್ದು, 247 ಉದ್ಯೋಗಿಗಳು ಗುತ್ತಿಗೆ ಆಧಾರದ ಮೇಲೆ ಮತ್ತು 7 ಉದ್ಯೋಗಿಗಳು ನಿಯೋಜನೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಕನ್ನಡಿಗರಿಗೂ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಹಾಗೂ ಕಿರುಕುಳವನ್ನು ತಪ್ಪಿಸಲೂ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.
Next Story





