ಉಡುಪಿ: ಫೆ.9ರಂದು ಮಾಹಿತಿ ಕಾರ್ಯಕ್ರಮ
ಉಡುಪಿ, ಫೆ. 8: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ ಮತ್ತು ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿ ಇವು ಗಳ ಸಂಯುಕ್ತ ಆಶ್ರಯದಲ್ಲಿ ಸಿಂಡಿಕೇಟ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ 3ನೆ ಮಹಡಿಯಲ್ಲಿ ಫೆ.9ರಂದು ಬೆಳಗ್ಗೆ 10 ಗಂಟೆಗೆ ಜನತಾ ಆದಾಲತ್, ಮಧ್ಯಸ್ಥಿಕೆ ಮತ್ತು ಸಮಾಲೋಚನ ವಿಷಯವಾಗಿ ಮಾಹಿತಿ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





