ಫೆ.10: ತೈಲ, ಅಡುಗೆ ಅನಿಲ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ, ಫೆ.8: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಸಹಯೋಗದೊಂದಿಗೆ ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಅಡುಗೆ ಅನಿಲಗಳ ಬೆಲೆಯೇರಿಕೆ ಮಾಡಿದ ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ವಿಶಿಷ್ಟ ರೀತಿಯ ಪ್ರತಿಭಟನಾ ಜಾಥಾ ಫೆ.10ರಂದು ಆಯೋಜಿಸಲಾಗಿದೆ.
ಅಪರಾಹ್ನ 3:30ಕ್ಕೆ ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದವರೆಗೆ ಜಾಥಾ ನಡೆಸಿ, ಅಲ್ಲಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





