ಫೆ.10ರಂದು ಉಡುಪಿ ಪ್ರೆಸ್‌ಕ್ಲಬ್ ಡೇ
ಉಡುಪಿ, ಫೆ.8: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭ ಫೆ.10ರಂದು ಸಂಜೆ 7 ಕ್ಕೆ ಉಡುಪಿ ಕ್ರಿಶ್ಚಿಯನ್ ಪ್ರೌಢ ಶಾಲೆ ಎದುರಿನ ಬಡಗಬೆಟ್ಟು ಕ್ರೆಡಿಟ್ -ಕೋ ಅಪರೇಟಿವ್ ಸೊಸೈಟಿಯ ಜಗ್ನಾಥ ಸಭಾ ಭವನದಲ್ಲಿ ನಡೆಯಲಿದೆ.
ಸಮಾರಂಭದ ಅದ್ಯಕ್ಷತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ್ ಬಿ. ನಿಂಬರಗಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಡಗಬೆಟ್ಟು ಕ್ರೆಡಿಟ್-ಕೋ ಅಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಇಂಟೆಕ್ ರಾಜ್ಯಾದ್ಯಕ್ಷ ರಾಕೇಶ್ ಮಲ್ಲಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಅದ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾದ್ಯಕ್ಷ ಮುನಿಯಾಲು ಉದಯ್ ಶೆಟ್ಟಿ ಉಪಸ್ಥಿತರಿರುವರು ಎಂದು ಸಂಘದ ಪ್ರಕಟನೆ ತಿಳಿಸಿದೆ.
Next Story





