ಸಾಲಬಾಧೆ: ರೈತ ಆತ್ಮಹತ್ಯೆ

ಮಂಡ್ಯ, ಫೆ.8: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದಲ್ಲಿ ನಡೆದಿದೆ.
ಮರಿಸ್ವಾಮಿ(65) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದ್ದು, ತನ್ನ 20 ಗುಂಟೆ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಿ ಜೀವನ ಸಾಗಿಸುತ್ತಿದ್ದರು. ಕ್ಯಾತನಹಳ್ಳಿ ಗ್ರಾಮದ ಸಹಕಾರ ಸಂಘದಲ್ಲಿ 50 ಸಾವಿರ ಸಾಲ ತೆಗೆದುಕೊಂಡಿದ್ದರು ಎನ್ನಲಾಗಿದೆ.
ಬುಧವಾರ ಜಮೀನಿನ ಬಳಿ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಮರಿಸ್ವಾಮಿ ಅವರನ್ನು ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
Next Story





