ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ 815 ಪಿಡಿಓಗಳ ನೇಮಕಾತಿ: ದೇಶಪಾಂಡೆ

ಬೆಂಗಳೂರು, ಫೆ.9: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ 815 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ(ಪಿಡಿಓ)ನ್ನು ನೇಮಕಾತಿ ಮಾಡಿಕೊಳ್ಳಲಾಗುವುದೆಂದು ಗ್ರಾಮೀಣಾಭಿವೃದ್ಧಿ ಸಚಿವರ ಪರವಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮೋಟಮ್ಮ ಪರವಾಗಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 15 ದಿನದೊಳಗಾಗಿ ಪ್ರಾಥಮಿಕ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯ 227 ಗ್ರಾಮ ಪಂಚಾಯತ್ ಗಳಲ್ಲಿ ಒಟ್ಟು 61 ಹುದ್ದೆಗಳು ಖಾಲಿ ಉಳಿದಿವೆ. ಈ ಪೈಕಿ ನೇರ ನೇಮಕಾತಿ ಖೋಟಾದಡಿ 36 ಹುದ್ದೆಗಳಿದ್ದು, 26 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬಾಕಿ ಉಳಿದಿರುವ 25 ಖಾಲಿ ಹುದ್ದೆಗಳನ್ನು ಮುಂಭಡ್ತಿ ಖೋಟಾದಡಿ ಇದ್ದು, ಅರ್ಹ ನೌಕರರು ಲಭ್ಯವಾದಲ್ಲಿ ಮುಂಭಡ್ತಿ ಮೂಲಕವೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.





