ಫೆ.11ರಂದು ವಿ.ಎಸ್.ಉಗ್ರಪ್ಪ ಉಡುಪಿ ಜಿಲ್ಲಾ ಪ್ರವಾಸ
ಉಡುಪಿ, ಫೆ.9: ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಫೆ.11ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವರು.
ಬೆಳಗ್ಗೆ 10.30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕ, ಜಿಪಂ ಸಿಇಒ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು, ಮಹಿಳಾ ಸಂಘಟನೆಗಳ ಕಳೆದ ಮೂರು ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಘಟಿಸಿದ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಕುರಿತು ಪುನರ್ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವರು.
ಮಧ್ಯಾಹ್ನ ಎರಡು ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಹೂಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





