Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ. 18ರಿಂದ ಕುಡುಪು ಕ್ಷೇತ್ರದ...

ಫೆ. 18ರಿಂದ ಕುಡುಪು ಕ್ಷೇತ್ರದ ಬ್ರಹ್ಮಕಲಶಕ್ಕೆ ಹೊರೆಕಾಣಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2018 9:24 PM IST
share

ಮಂಗಳೂರು, ಫೆ. 9: ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕುಡುಪು ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 18ರಿಂದ ವಿವಿಧ ಕಡೆಗಳಿಂದ ಹೊರೆಕಾಣಿಕೆ ಸಲ್ಲಿಕೆಯಾಗಲಿದೆ ಎಂದು ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಕಡಂಬೋಡಿ ಮಹಾಬಲ ಪೂಜಾರಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಫೆ. 18ರಂದ ಮಧ್ಯಾಹ್ನ 2.30ಕ್ಕೆ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್ ಹಾಗೂ ಶಾರದಾ ಸಮೂಹ ಸಂಸ್ಥೆಯ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಹಾಗೂ ಶರವು ದೇವಸ್ಥಾನದ ಮೊಕ್ತೇಸರ ಶರವು ರಾಘವೇಂದ್ರ ಶಾಸ್ತ್ರಿಗಳ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಮರ್ಪಣಾ ಕಾರ್ಯ್ರಮ ಉದ್ಘಾಟನೆಗೊಳ್ಳಲಿದೆ ಎಂದರು.

ಬಳಿಕ ನಗರದ ನೆಹರೂ ಮೈದಾನದಿಂದ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಹಸಿರು ನಿಶಾನೆ ತೋರಲಾಗುವುದು. ಮೆರವಣಿಗೆಯು ನೆಹರೂ ಮೈದಾನದಿಂದ ಅಂಬೇಡ್ಕರ ವೃತ್ತ ಮೂಲಕ ಬಂಟ್ಸ್ ಹಾಸ್ಟೆಲ್, ಕದ್ರಿ, ನಂತೂರು, ಬಿಕರ್ನಕಟ್ಟೆ, ಕೈಕಂಬ, ಕುಲಶೇಖರ, ಚೌಕಿ ಬೈತುರ್ಲಿಯಾಗಿ ಕುಡುಪು ಕ್ಷೇತ್ರಕ್ಕೆ ಆಗಮಿಸಲಿದೆ. ಫೆ. 20ರಂದು ಮಧ್ಯಾಹ್ನ 2 ಗಂಟೆಗೆ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಹಾಗೂ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಐ. ರಮಾನಂದ ಭಟ್ ಉಪಸ್ಥಿತಿಯಲ್ಲಿ ಸುರತ್ಕಲ್ ವಲಯದಿಂ ಹೊರೆಕಾಣಿಕೆ ಸಮರ್ಪಣೆಯಾಗಲಿದೆ.

ಫೆ. 22ರಂದು ಸಂಜೆ 4 ಗಂಟೆಗೆ ವಾಮಂಜೂರು ಶ್ರೀರಾಮ ಭಜನಾ ಮಂದಿರದಿಂದ, ಮಧ್ಯಾಹ್ನ 2 ಗಂಟೆಗೆ ಮೂಡಬಿದ್ರೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಹೊರೆಕಾಣಿಕೆ ಕುಡುಪು ಕ್ಷೇತ್ರಕ್ಕೆ ಆಗಮಿಸಲಿದೆ ಎಂದು ಅವರು ವಿವರ ನೀಡಿದರು.

ಹೊರೆಕಾಣಿಕೆಯ ಅಂಗವಾಗಿ ವಸ್ತುಗಳ ಸಂಗ್ರಹಣಾ ಕೇಂದ್ರವು ಶರವು ಮಹಾಗಣಪತಿ ದೇವಸ್ಥಾನದಲ್ಲಿ ಫೆ. 10ರಂದು, ಫೆ. 16ರಂದು ವಾಮಂಜೂರು ರಾಮ ಭಜನಾ ಮಂದಿರ, ಫೆ. 17ರಂದು ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಕೃಷ್ಣ ರಾಜತಂತ್ರಿ, ಪ್ರಧಾನ ಕಾರ್ಯದರ್ಶಿ ಸುಜನ್ ದಾಸ್ ಕುಡುಪು, ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಶರಣ್ ಪಂಪ್‌ವೆಲ್, ಮನೋಹರ ಭಟ್, ಪ್ರಭಾಕರ ಭಟ್, ಗಣೇಶ್ ಭಟ್, ಪುಷ್ಪರಾಜ ಪೂಜಾರಿ, ಉದಯ ಕುಮಾರ್ ಕುಡುಪು, ನವೀನ್ ಮೂಡುಶೆಡ್ಡಿ , ಜಗನ್ನಾಥ ಶೆಟ್ಟಿ ಬಾ ಮೊದಲಾದವರು ಉಪಸ್ಥಿತರಿದ್ದರು.

ಹೊರೆಕಾಣಿಕೆಗೆ ಸಲ್ಲಿಸಬಹುದಾದ ವಸ್ತುಗಳು

ಹೊರೆಕಾಣಿಕೆಗೆ ಸ್ಟೀಲ್ ಬಾಲ್ದಿ, ಸೌಟು, ಕಡಾಯಿ, ಹುಟ್ಟು (ಅನ್ನ ಬಡಿಸುವ ಸೌಟು), ಕೌಳಿಗೆ, ಲೋಟಗಳು ಹಾಗೂ ಪ್ಲೇಟ್‌ಗಳು.
ಬೆಳ್ತಿಗೆ ಅಕ್ಕಿ (ಬಾಲಾಜಿ, ಟೈಗರ್ ಸ್ಟ್ರೋಬರಿ, ಪವನ್ ಬ್ರಾಂಡ್), ತೆಂಗಿನಕಾಯಿ, ಗೋಧಿ, ಉದ್ದ ಮೆಣಸು, ಗಿಡ್ಡ ಮೆಣಸು, ತೊಗರಿಬೇಳೆ, ಕಡ್ಲೆ ಹಿಟ್ಟು, ಮೈದಾ, ಕೊತ್ತಂಬರಿ, ಸಾಸಿವೆ, ಸಕ್ಕರೆ, ಕಡ್ಲಬೇಳೆ, ಉದ್ದಿನ ಬೇಳೆ, ಹೆಸರು ಬೇಳೆ, ಬೆಲ್ಲ, ತೆಂಗಿನೆಣ್ಣೆ, ತುಪ್ಪ, ಹುಳಿ, ರುಚಿ ಗೋಲ್ಡ್ ಸನ್ ಪ್ಲವರ್ ಎಣ್ಣೆ, ಬಾಂಬೆ ರವೆ, ಉಪ್ಪು, ಕಣ್ವ ಸಜ್ಜಿಗೆ, ಅವಲಕ್ಕಿ, ಬಟಾಣಿ, ಬಿಳಿ ಕಡಲೆ, ಹುರುಳಿ ಇತರ ಅಡುಗೆಗೆ ಬೇಕಾದ ಉಪಯುಕ್ತ ದಿನಸಿ ಸಾಮಗ್ರಿಗಳು, ಸೀಯಾಳ, ಹಿಂಗಾರ, ಫಲವಸ್ತುಗಳು, ಬಾಳೆಹಣ್ಣಿನ ಗೊನೆ, ಬಾಳೆ ಎಲೆ. ನೀರುಳ್ಳಿ, ಬೆಳ್ಳುಳ್ಳಿ, ಕಾಲಿಪ್ಲವರ್, ಸೋರೆಕಾಯಿ, ಬಸಳೆ ಹೊರತುಪಡಿಸಿ ಇತರ ಎಲ್ಲಾ ಬಗೆಯ ತರಕಾರಿಗಳನ್ನು ನೀಡಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X