ಶಿವರಾಜ್ ಕರ್ಕೇರಾ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳು ಸೆರೆ

ಮಂಗಳೂರು, ಫೆ. 9: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಶಿವರಾಜ್ ಕರ್ಕೇರಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳನ್ನು ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಕುದ್ರೋಳಿ ಬೆಂಗ್ರೆಯ ಕೋಟೆದ ಬಬ್ಬು ಸ್ವಾಮಿ ದೈವಸ್ಥಾನದ ಬಳಿಯ ನಿವಾಸಿಗಳಾದ ಅನೀಶ್ ಅಮೀನ್ (28), ವಿತರಾಜ್ (23) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳು ಕೊಲೆ ನಡೆಸಿದ ಬಳಿಕ ಬೆಂಗಳೂರಿಗೆ ತೆರಳಿ ಅಲ್ಲಿಂದ ಒರಿಸ್ಸಾ, ಅಸ್ಸಾಂ, ನಾಗಲ್ಯಾಂಡ್ ಮೊದಲಾದ ಕಡೆ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿ ಬಂಧಿಸಿದ್ದಾರೆ.
Next Story





