ಗಾಂಜಾ ಮಾರಾಟ: ವ್ಯಕ್ತಿಯ ಬಂಧನ; 55 ಕೆ.ಜಿ. ಗಾಂಜಾ ವಶ

ಬೆಂಗಳೂರು, ಫೆ.9: ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 55ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮನು ಕುಮಾರ್(25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಕೋಣನಕುಂಟೆ ವ್ಯಾಪ್ತಿಯ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿಯ ಮನೆಯೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನೆಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೋಲಿಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





