ಟ್ಯಾಂಕರ್ - ಬೈಕ್ ಢಿಕ್ಕಿ: ಸೆಕ್ಯೂರಿಟಿ ಗಾರ್ಡ್ ಮೃತ್ಯು

ಬೆಂಗಳೂರು, ಫೆ.9: ವಾಟರ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಎಚ್‌ಎಎಲ್ ಏರ್‌ಪೋರ್ಟ್ ಸಂಚಾರ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಪಣತ್ತೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ರಾಜೇಶ್ ಕುಮಾರ್ ನಾಯ್ಕ್(27) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅತಿವೇಗವಾಗಿ ಬಂದ ವಾಟರ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಾಜೇಶ್ ಕುಮಾರ್ ನಾಯ್ಕ್ ರಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೋಲಿಸರು ತನಿಖೆ ಮುಂದುವರೆಸಿದ್ದಾರೆ.
Next Story





