Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್...

ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Feb 2018 10:56 PM IST
share
ಚುನಾವಣಾ ಸಿದ್ಧತೆ: ಅನಧಿಕೃತ ಬ್ಯಾನರ್ ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಫೆ.9: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿರುವ ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ನಡೆದ ಅಧಿಕಾರಿಗಳ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯನ್ನು ಪಡೆದು ಬಂಟಿಂಗ್ಸ್‌ಗಳನ್ನು ಹಾಕಲು ಸೂಚನೆಯನ್ನು ನೀಡಿದ್ದಾರೆ. ಅನುಮತಿ ಪಡೆಯದೇ ಇರುವವರ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಅಂತಹ ಬ್ಯಾನರ್‌ಗಳನ್ನು ಮತ್ತು ಅವಧಿ ಮೀರಿದ ಬ್ಯಾನರ್‌ಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದ್ದಾರೆ.

ಚುನಾವಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು , ಚುನಾವಣಾ ದಿನಾಂಕ ಪ್ರಕಟವಾಗುವ ಮುಂಚೆ ಎಲ್ಲಾ ಅನಧಿಕೃತ ಬ್ಯಾನರ್‌ಗಳನ್ನು ತೆರವುಗೊಳಿಸಿ ಶಾಂತಿಯುತವಾಗಿ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಈ ವರ್ಷವೂ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯಲಿದ್ದು, ಇದಕ್ಕೆ ಪೂರಕವಾಗಿ ವಿವಿ ಪ್ಯಾಟ್‌ಗಳನ್ನು ಬಳಸುತ್ತಿದ್ದು ಇದರಲ್ಲಿ ಯಾವುದೇ ಲೋಪದೋಷಗಳು ನಡೆಯದಂತೆ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸಲು ಸಹಕರಿಸಬೇಕೆಂದು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತ ಎಣಿಕೆ ಗೊಂದಲ ಮಾಡಿದರೆ ಈ ಮುದ್ರಣವನ್ನು ಮತ್ತೊಮ್ಮೆ ಎಣಿಕೆ ಮಾಡಲು ಅವಕಾಶವಿದ್ದು , ಇಲ್ಲಿ ಗೊಂದಲಕ್ಕೆ ಅವಕಾಶವಿರುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದರೆ ಹಾಗೂ ಕರ್ತವ್ಯ ವೇಳೆಯಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಿದ್ದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರಸಕ್ತ ವರ್ಷದಲ್ಲಿ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಅಂಕಿ ಅಂಶಗಳನ್ನು ದಾಖಲಿಸಬೇಕಾಗಿರುವುದರಿಂದ ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ ರೂಂ ಗಳನ್ನು ರಚಿಸಿ ಡಾಟಾ ಎಂಟ್ರಿ ಅಪರೇಟರ್‌ಗಳ ಮೂಲಕ ಕಾರ್ಯ ನಿರ್ವಹಿಸಲಾಗುವುದು. ಚುನಾವಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಲು ಸಹಕರಿಸಬೇಕು ಎಂದರು. ಮತದಾನದ ಮಾತಿಯನ್ನು ನೀಡಲು ಅನುಭವಿ ವೀಡಿಯೊಗ್ರಾಫರ್‌ಗಳನ್ನು ನೇಮಿಸಬೇಕೆಂದು ಸಲಹೆ ನೀಡಿದರು.

ನೀತಿ ಸಂತೆ ಘೋಷನೆಯಾಗುತ್ತಿದ್ದಂತೆಯೇ ಎಲ್ಲ ಸರಕಾರಿ ಅಧಿಕಾರಿಗಳು, ನೌಕರರು ಚುನಾವಣಾ ಆಯೋಗಕ್ಕೆ ನಿಯೋಜನೆಗೊಳ್ಳಲಿದ್ದು, ಚುನಾವಣಾ ಕರ್ತ್ಯವನ್ನು ಸೇವೆಯೆಂದು ಪರಿಗಣಿಸಬೇಕು ಎಂದರು.

ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಮ್.ಆರ್ ರವಿ ಮಾತನಾಡಿ, ಚುನಾವಣಾಧಿಕಾರಿಗಳು ಚುನಾವಣೆಯ ಗಂಭೀರತೆಯನ್ನು ಅರ್ಥೈಸಿಕೊಂಡು ಕೆಲಸ ಮಾಡಬೇಕು ಎಂದರು. ಈಗಾಗಲೇ ಚುನಾವಣೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಖ್ಯವಾಗಿ ಜಿಲ್ಲೆಯ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕಾಲೇಜ್‌ಗಳಲ್ಲಿ ಕ್ಯಾಂಪಸ್ ರಾಯಭಾರಿಗಳನ್ನು ಆಯ್ಕೆ ಮಾಡಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಬೂತ್ ಮಟ್ಟದ ಜಾಗೃತಿ ಗುಂಪಿನ ರಚನೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಚುನಾವಣಾಧಿಕಾರಿಯವರು ಮತದಾನ ನಡೆಯುವ ಕ್ಷೇತ್ರದಲ್ಲಿನ ಅಂಕಿ ಅಂಶಗಳನ್ನು ಕಡ್ಡಾಯವಾಗಿ ನೀಡಬೇಕಾಗಿದ್ದು, ಯಾವುದೇ ಪ್ರದೇಶದಲ್ಲಿ ಕಡಿಮೆ ಮತದಾನ ನಡೆದರೆ ಅದರ ಕುರಿತು ವಿವರವಾದ ಮಾಹಿತಿ ನೀಡುವಂತೆ ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವವರು ಆದಷ್ಟು ಬೇಗ ಸೇರಿಸಿ ಚುನಾವಣೆಯಲ್ಲಿ ವಿವೇಚನೆಯಿಂದ ಪಾಲ್ಗೊಳ್ಳಲು ಹೇಳಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಮಹಾನಗರ ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಸಹಾಯಕ ಆಯುಕ್ತ ರೇಣುಕಾಪ್ರಸಾದ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಜೀತ್ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X