ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ: ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ ಸರಕಾರ
ಬೆಂಗಳೂರು, ಫೆ.9: ಪಾವಗಡ ನಗರ, ಪಾವಗಡ ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸಲು ರಾಜ್ಯ ಸರಕಾರ ಈಗಾಗಲೇ 2352.6 ಕೋಟಿ ರೂ.ಹಣವನ್ನು ಮೀಸಲಿಟ್ಟಿದ್ದು, ತುಂಗಭದ್ರ ನದಿಯಿಂದ 1.36 ಟಿಎಂಸಿ ನೀರನ್ನು ತರಲು ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತು.
ಚಿತ್ರದುರ್ಗ ಜಿಲ್ಲೆ ಹಾಗೂ ಪಾವಗಡ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಇದನ್ನು ಬಗೆಹರಿಸಲು ನಿರ್ದೇಶಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು.
ಸರಕಾರದ ಪರ ವಾದಿಸಿದ ವಕೀಲರು, ಚಿತ್ರದುರ್ಗ ಜಿಲ್ಲೆ ಹಾಗೂ ಪಾವಗಡ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಹಣವನ್ನು ಮೀಸಲಿಟ್ಟಿದೆ. ಹಾಗೂ ಪಾವಗಡ ತಾಲೂಕಿನಲ್ಲಿ ಈಗಾಗಲೇ ನೀರು ಸಂಗ್ರಹಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.
Next Story





