Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೌಹರ್ ರಝಾರ ಕ್ಷಮೆ ಕೋರಲು ‘ಝೀ ನ್ಯೂಸ್’...

ಗೌಹರ್ ರಝಾರ ಕ್ಷಮೆ ಕೋರಲು ‘ಝೀ ನ್ಯೂಸ್’ ಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Feb 2018 10:51 PM IST
share
ಗೌಹರ್ ರಝಾರ ಕ್ಷಮೆ ಕೋರಲು ‘ಝೀ ನ್ಯೂಸ್’ ಗೆ ಸೂಚನೆ

ಹೊಸದಿಲ್ಲಿ, ಫೆ.10: ಹೊಸದಿಲ್ಲಿಯಲ್ಲಿ 2016ರ ಮಾರ್ಚ್ 3ರಂದು ನಡೆದಿದ್ದ ವಾರ್ಷಿಕ ‘ಶಂಕರ್ ಶಾದ್ (ಭಾರತ-ಪಾಕ್) ಮುಷಾಯಿರ’ ಕಾರ್ಯಕ್ರಮದಲ್ಲಿ ಪ್ರೊ. ಗೌಹರ್ ರಝಾ ಅವರು ನಡೆಸಿಕೊಟ್ಟ ಕಾವ್ಯ ವಾಚನ ಕಾರ್ಯಕ್ರಮಕ್ಕೆ ‘ಅಫ್ಜಲ್ ಪ್ರೇಮಿ ಗ್ಯಾಂಗ್ ಕಾ ಮುಷಾಯಿರ’ ಎಂದು ಹೆಸರಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ, ರಝಾ ಅವರ ಕ್ಷಮೆ ಕೋರುವಂತೆ ಝೀ ನ್ಯೂಸ್ ಚಾನೆಲ್‌ಗೆ ಸೂಚನೆ ನೀಡಲಾಗಿದೆ.

ಭಾರತ- ಪಾಕ್ ಸಂಬಂಧವನ್ನು ಸುಧಾರಿಸುವ ಕ್ರಮವಾಗಿ 1954ರಿಂದ ನಡೆಸಿಕೊಂಡು ಬಂದಿರುವ ಮುಷಾಯಿರ ಕಾರ್ಯಕ್ರಮದ ಕಾವ್ಯ ವಾಚನದ ವೀಡಿಯೊ ದೃಶ್ಯಾವಳಿಯನ್ನು ಝೀ ನ್ಯೂಸ್ ಚಾನೆಲ್‌ನಲ್ಲಿ ‘ಅಫ್ಜಲ್ ಪ್ರೇಮಿ ಗ್ಯಾಂಗ್ ಕಾ ಮುಷಾಯಿರ’ ಎಂಬ ಹೆಸರಿನಲ್ಲಿ 2016ರ ಮಾರ್ಚ್ 9ರಿಂದ 12ರವರೆಗೆ ಪ್ರಸಾರ ಮಾಡಲಾಗಿತ್ತು. ಈ ಕಾರ್ಯಕ್ರಮದ ವೀಡಿಯೊ ದೃಶ್ಯಾವಳಿ ಪ್ರಸಾರದ ಸಂದರ್ಭ ಅಫ್ಜಲ್ ಗುರುವಿನ ವಿವಿಧ ಫೋಟೋಗಳು ಹಾಗೂ ಜೆಎನ್‌ಯು ವಿವಿಯಲ್ಲಿ ನಡೆದಿದೆ ಎನ್ನಲಾಗಿರುವ ಕೆಲವು ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆ ಕೂಗುತ್ತಿರುವ ಚಿತ್ರಗಳನ್ನೂ ಆಗಿಂದಾಗ್ಗೆ ಪ್ರಸಾರ ಮಾಡಲಾಗುತ್ತಿತ್ತು. ಇದಕ್ಕೆ ಆಕ್ಷೇಪ ಸೂಚಿಸಿದ್ದ ಗೌಹರ್ ರಝಾ ‘ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಸ್ಟಾಂಡರ್ಡ್ಸ್ ಅಥಾರಿಟಿ’(ಎನ್‌ಬಿಎಸ್‌ಎ)ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಎನ್‌ಬಿಎಸ್‌ಎ ಝೀ ನ್ಯೂಸ್‌ಗೆ ಕ್ಷಮೆ ಕೋರುವಂತೆ ಹಾಗೂ 1 ಲಕ್ಷ ರೂ. ದಂಡ ತೆರುವಂತೆ ಸೂಚಿಸಿತ್ತು. ಈ ಆದೇಶವನ್ನು ರದ್ದುಗೊಳಿಸಬೇಕೆಂಬ ಮನವಿ ಸಲ್ಲಿಸಿದ್ದ ಝೀ ನ್ಯೂಸ್ ಪರ ವಕೀಲರು, ದೇಶದಲ್ಲಿ ವಾಕ್‌ಸ್ವಾತಂತ್ರ ಹಾಗೂ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂಬುದನ್ನು ತೋರಿಸಿಕೊಡಲು ಕಾರ್ಯಕ್ರಮದ ವೀಡಿಯೊ ಚಿತ್ರೀಕರಣ ಮಾಡಿಕೊಂಡಿದ್ದೇವೆ ಎಂದಿದ್ದರು.

 ಆದರೆ ಈ ಮನವಿಯನ್ನು ತಿರಸ್ಕರಿಸಿದ ಎನ್‌ಬಿಎಸ್‌ಎ , 2018ರ ಫೆ. 16ರಂದು ರಾತ್ರಿ 9 ಗಂಟೆಗೆ ಕ್ಷಮೆ ಯಾಚಿಸುವ ಹೇಳಿಕೆಯನ್ನು ಪ್ರಸಾರ ಮಾಡಬೇಕು. ಅಲ್ಲದೆ ಏಳು ದಿನಗಳೊಳಗೆ 1 ಲಕ್ಷ ರೂಪಾಯಿಯ ದಂಡದ ಮೊತ್ತವನ್ನು ಜಮೆ ಮಾಡಬೇಕು ಹಾಗೂ ತನ್ನ ಬಳಿಯಿದ್ದ ವೀಡಿಯೊವನ್ನು ಅಳಿಸಿ ಹಾಕುವಂತೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X