Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚರಿತ್ರೆ ಸತ್ಯ-ಅಸತ್ಯ ಮೀರಿದ್ದು:...

ಚರಿತ್ರೆ ಸತ್ಯ-ಅಸತ್ಯ ಮೀರಿದ್ದು: ಡಾ.ಸಿಎನ್‌ಆರ್

ವಾರ್ತಾಭಾರತಿವಾರ್ತಾಭಾರತಿ11 Feb 2018 9:51 PM IST
share
ಚರಿತ್ರೆ ಸತ್ಯ-ಅಸತ್ಯ ಮೀರಿದ್ದು: ಡಾ.ಸಿಎನ್‌ಆರ್

ಬೆಂಗಳೂರು, ಫೆ.11: ಜಗತ್ತಿನ ಯಾವು ಚರಿತ್ರೆಗೂ ಏಕ ಮುಖವಾಗಿರುವಂತಹ ಒಳ್ಳೆಯದ್ದು, ಕೆಟ್ಟದ್ದು ಎಂಬ ಚೌಕಟ್ಟು ಇರುವುದಿಲ್ಲ. ಇದು ಆ ಚರಿತ್ರೆಯಲ್ಲಿ ಬರುವ ನಾಯಕರಿಗೂ ಅನ್ವಯಿಸುತ್ತದೆ ಎಂದು ಹಿರಿಯ ವಿಮರ್ಶಕ ಡಾ.ಸಿ.ಎನ್. ರಾಮಚಂದ್ರನ್ ಅಭಿಪ್ರಾಯಿಸಿದರು.

ರವಿವಾರ ಆಕೃತಿ ಆಶಯ ನಗರದ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಿದ್ದ ತಳುನಾಡಿನ ಹಿರಿಯ ಸಾಹಿತಿ ಡಿ.ಕೆ.ಚೌಟರವರ ‘ಮಿತ್ತಬೈಲು ಯಮುನಕ್ಕ’ ಇಂಗ್ಲಿಷ್ ಅನುವಾದ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಯಾವ ಚರಿತ್ರೆಯು ಸರಳ ರೇಖೆಯಂತೆ ಸರಳವಾಗಿರುವುದಿಲ್ಲ, ಪ್ರತಿ ಚರಿತ್ರೆಯೂ ಬಹು ಆಯಾಮಗಳನ್ನು ಹೊಂದಿರುತ್ತದೆ. ಹೀಗಾಗಿ ಯಾವುದೆ ಚರಿತ್ರೆಯನ್ನು ಯಾರಿಂದಲೂ ಸಂಪೂರ್ಣವಾಗಿ ಅರಿಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಟಿಪ್ಪು ಸುಲ್ತಾನ್ ಮಾಡಿದ್ದೆಲ್ಲವೂ ಕೆಟ್ಟದ್ದು, ಇಲ್ಲವೆ ಒಳ್ಳೆಯದು ಎಂದು ಸೀಮಿತವಾಗಿ ಅರ್ಥೈಸಲು ಸಾಧ್ಯವಿಲ್ಲ. ಚರಿತ್ರೆಯ ಆಯಾಮಗಳು ಬಹುಮುಖತೆಯನ್ನು ಹೊಂದಿದ್ದು, ಪ್ರತಿಘಟನೆಯು ಹಲವಾರು ಹಿನ್ನೆಲೆಗಳನ್ನು ಹೊಂದಿರುತ್ತವೆ. ಹಾಗೆಯೆ ಬ್ರಿಟಿಷರು ಮಾಡಿದೆಲ್ಲವೂ ಅನಾಚಾರವಾಗಿರಲಿಲ್ಲ. ಹೀಗೆ ನಮ್ಮ ಚರಿತ್ರೆಗಳು ಹಲವು ಸಂಕಿರ್ಣತೆಗಳನ್ನು ಒಳಗೊಂಡಿರುತ್ತವೆ. ಇದನ್ನು ಅರ್ಥ ಮಾಡಿಕೊಳ್ಳದೆ ತಮ್ಮ ಸ್ವಾರ್ಥಕ್ಕೆ ಬೇಕಾದ ರೀತಿಯಲ್ಲಿ ಮಾತನಾಡುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ವಿಷಾಧಿಸಿದರು.

ನಮ್ಮ ನಾಡಿನ ಹಿರಿಯ ಸಾಹಿತಿ ಡಿ.ಕೆ.ಚೌಟರವರ ‘ಮಿತ್ತಬೈಲು ಯಮನಕ್ಕ’ ಕಾದಂಬರಿಯಲ್ಲಿ ತುಳುನಾಡಿನ ಸ್ವಾತಂತ್ರ ಪೂರ್ವದ ಚರಿತ್ರೆಯನ್ನು ಹಲವು ಮುಖಗಳಲ್ಲಿ ಕಟ್ಟಿಕೊಟ್ಟಿದ್ದಾರೆ. ಕಾದಂಬರಿಯಲ್ಲಿ ಬರುವ ಪ್ರತಿ ಪಾತ್ರಕ್ಕೂ ಒಂದೆ ಬಣ್ಣ ಇರುವುದಿಲ್ಲ. ಒಳ್ಳೆಯವರಲ್ಲಿ ಕೆಟ್ಟಗುಣ, ಕೆಟ್ಟವರಲ್ಲಿ ಒಳ್ಳೆಯ ಗುಣಗಳು ಅಡಗಿರುತ್ತದೆ ಎಂಬುದನ್ನು ತಮ್ಮ ಕಾದಂಬರಿಯಲ್ಲಿ ವಿವರಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಬಿ.ಎ.ವಿವೇಕ್‌ರೈ, ಮಿತ್ತಬೈಲ್ ಯಮುನಕ್ಕ ಕಾದಂಬರಿಯ ಅನುವಾದಕರಾದ ಪ್ರೊ.ಬಿ.ಸುರೇಂದ್ರ ರಾವ್, ಕೆ.ಚಿನ್ನಪ್ಪ ಗೌಡ ಹಾಗೂ ಕಾದಂಬರಿಕಾರ ಡಿ.ಕೆ.ಚೌಟ ಉಪಸ್ಥಿತರಿದ್ದರು. ಈ ವೇಳೆ ಕಾದಂಬರಿಯ ಆಯ್ದ ಭಾಗವನ್ನು ಕಲಾವಿದರು ನಾಟಕ ರೂಪದಲ್ಲಿ ಅಭಿನಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X