Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಬುಧಾಬಿ ರಾಜಕುಮಾರ ಪ್ರಧಾನಿ ಮೋದಿ ಭೇಟಿ:...

ಅಬುಧಾಬಿ ರಾಜಕುಮಾರ ಪ್ರಧಾನಿ ಮೋದಿ ಭೇಟಿ: 5 ಒಪ್ಪಂದಗಳಿಗೆ ಸಹಿ

ವಾರ್ತಾಭಾರತಿವಾರ್ತಾಭಾರತಿ11 Feb 2018 10:01 PM IST
share
ಅಬುಧಾಬಿ ರಾಜಕುಮಾರ ಪ್ರಧಾನಿ ಮೋದಿ ಭೇಟಿ: 5 ಒಪ್ಪಂದಗಳಿಗೆ ಸಹಿ

ಅಬುದಾಬಿ, ಫೆ.11: ಅಬುದಾಬಿಯ ರಾಜಕುಮಾರ ಮುಹಮ್ಮದ್ ಬಿನ್ ಝಯೇದ್ ಅಲ್ ನಹ್ಯಾನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಸುದೀರ್ಘ ಮಾತುಕತೆ ನಡೆಸಿದರು. ಈ ವೇಳೆ ಭಾರತೀಯ ತೈಲ ಕಂಪೆನಿಗಳಿಗೆ ಕಡಲಾಚೆಯ ತೈಲಾಗಾರಗಳಲ್ಲಿ ಶೇ.10 ಪಾಲುದಾರಿಕೆಯನ್ನು ನೀಡುವ ಐತಿಹಾಸಿಕ ಒಪ್ಪಂದವೂ ಸೇರಿದಂತೆ ಐದು ಒಪ್ಪಂದಗಳಿಗೆ ಎರಡು ದೇಶಗಳು ಸಹಿ ಹಾಕಿದವು.

ಮೂರು ದೇಶಗಳ ಪ್ರವಾಸದ ಎರಡನೇ ಹಂತದಲ್ಲಿ ಜೋರ್ಡಾನ್‌ನಿಂದ ಅಬುಧಾಬಿ ತಲುಪಿದ ಮೋದಿಯವರನ್ನು ಮುಹಮ್ಮದ್ ಬಿನ್ ಝಯೇದ್ ಹಾಗೂ ರಾಜಮನೆತನದ ಇತರರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ವೇಳೆ ರಾಜಕುಮಾರರಿಗೆ ಧನ್ಯವಾದ ತಿಳಿಸಿದ ಮೋದಿ, ಈ ಭೇಟಿಯು ಭಾರತ-ಯುಎಇ ಸಂಬಂಧದ ಮೇಲೆ ಗುಣಾತ್ಮಕ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

ಯುಎಇಗೆ ಎರಡನೇ ಬಾರಿ ಆಗಮಿಸಿದ ಮೋದಿ ಶನಿವಾರದಂದು ರೋಯಲ್ ಪ್ಯಾಲೇಸ್‌ನಲ್ಲಿ ಮುಹಮ್ಮದ್ ಬಿನ್ ಝಯೇದ್ ಜೊತೆ ಸಮಾಲೋಚನೆ ನಡೆಸಿದರು. ಮೋದಿ, ರೋಯಲ್ ಪ್ಯಾಲೇಸ್‌ಗೆ ಆಹ್ವಾನಿಸಲ್ಪಟ್ಟ ಮೊದಲ ವಿದೇಶಿ ನಾಯಕರಾಗಿದ್ದಾರೆ. ಆಧುನಿಕ ರಾಷ್ಟ್ರವಾಗಿ ಯುಎಇಯ ಅಭಿವೃದ್ಧಿಯಲ್ಲಿ ಭಾರತೀಯ ನೌಕರರು ನಿರ್ವಹಿಸಿರುವ ಪಾತ್ರವನ್ನು ಈ ವೇಳೆ ಅಬುಧಾಬಿ ರಾಜಕುಮಾರ ಶ್ಲಾಘಿಸಿದರು.

ಬಳಿಕ ಭಾರತೀಯ ತೈಲ ಒಕ್ಕೂಟ (ಒವಿಎಲ್, ಬಿಆರ್‌ಪಿಎಲ್, ಐಒಸಿಎಲ್) ಮತ್ತು ಅಬುಧಾಬಿ ರಾಷ್ಟ್ರೀಯ ತೈಲ ಸಂಸ್ಥೆಯ ಮಧ್ಯೆ ಒಪ್ಪಂದದ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಒಪ್ಪಂದದ ಪ್ರಕಾರ 2018ರಿಂದ 2057ರ ವರೆಗೆ ಭಾರತೀಯ ತೈಲ ಸಂಸ್ಥೆಗಳಿಗೆ ಅಬುಧಾಬಿಯ ಲೋವರ್ ಝಕೂಮ್‌ನ ತೈಲಾಗಾರದಲ್ಲಿ ರಿಯಾಯಿತಿ ದೊರೆಯಲಿದೆ ಎಂದು ಭಾರತೀಯ ರಾಯಭಾರ ಕಚೇರಿಯು ನೀಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಜನಶಕ್ತಿಯ ಕ್ಷೇತ್ರದಲ್ಲಿ ಸಹಕಾರಿಸುವ ಸಲುವಾಗಿ ಭಾರತ ಮತ್ತು ಯುಎಇ ತಿಳುವಳಿಕೆ ಪತ್ರವೊಂದಕ್ಕೆ ಸಹಿ ಮಾಡಿದೆ. ಅದರ ಪ್ರಕಾರ ಕೊಲ್ಲಿ ರಾಷ್ಟ್ರದಲ್ಲಿ ಭಾರತೀಯ ನೌಕರರ ಒಪ್ಪಂದ ಆಧಾರಿತ ಕೆಲಸದ ಸಹಯೋಗ ಆಡಳಿತವನ್ನು ಸಾಂಸ್ಥಿಕಗೊಳಿಸಲಾಗುವುದು.

ರೈಲ್ವೇ ಇಲಾಖೆಯಲ್ಲಿ ತಾಂತ್ರಿಕ ಸಹಕಾರ, ಬಾಂಬೆ ಶೇರು ಮಾರುಕಟ್ಟೆ ಮತ್ತು ಅಬುಧಾಬಿ ಸೆಕ್ಯೂರಿಟಿ ಎಕ್ಸ್‌ಚೇಂಜೆಸ್, ಜಮ್ಮು ಮತ್ತು ಕಾಶ್ಮೀರ ಸರಕಾರ ಮತ್ತು ಡಿಪಿ ವರ್ಲ್ಡ್, ಹೀಗೆ ಐದು ತಿಳುವಳಿಕೆ ಪತ್ರಗಳಿಗೆ ಈ ವೇಳೆ ಸಹಿ ಹಾಕಲಾಯಿತು.

ಮೋದಿಗೆ ಸ್ವಾಗತಕೋರಿ ನಗರದ ಹಲವು ಕಟ್ಟಡಗಳನ್ನು ತ್ರಿವರ್ಣ ಧ್ವಜದ ಬಣ್ಣದ ಬೆಳಕಿನಿಂದ ಅಲಂಕರಿಸಲಾಗಿತ್ತು. ರವಿವಾರಂದು ಪ್ರಧಾನಿ, ಯುಎಇಯ ಹುತಾತ್ಮ ಯೋಧರ ಸ್ಮಾರಕ ವಾಹತ್ ಅಲ್ ಕರಾಮಾಗೆ ತೆರಳಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕೊರಿದರು. ಯುಎಇಯಿಂದ ಮೋದಿ ಒಮನ್‌ಗೆ ತೆರಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X