ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ, ಫೆ.11: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಉಪ್ಪೂರು ಗ್ರಾಮದ ಸಾಲ್ಮರದ ಕೂಸ ನಾಯಕ(80) ಎಂಬವರು ಫೆ.9ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ವಿಪರೀತ ಕುಡಿತದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಉತ್ತರ ಪ್ರದೇಶ ಮೂಲದ ಉಳಿಯಾರಗೋಳಿ ಗ್ರಾಮದ ಕಲ್ಯಾ ನಿವಾಸಿ ನಂದನ್ ಯಾದವ ಎಂಬವರು ಫೆ.10ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವು ದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದ ಉಪ್ಪುಂದ ಅಂಬಾ ಗಿಲು ನಿವಾಸಿ ನಾರಾಯಣ ಗಾಣೆಗಾ ಎಂಬವರ ಪುತ್ರ ಅಣ್ಣಪ್ಪ ಗಾಣೆಗಾ (32) ಎಂಬವರು ಫೆ.8ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದು, ಇವರು ಜೀವನದಲ್ಲಿ ಜಿಗುಪ್ಸೆಹೊಂದಿ ಫೆ.8ರಿಂದ 10ರ ಮಧ್ಯಾವಧಿಯಲ್ಲಿ ಕಾಲ್ತೋಡು ಹಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





