Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ನಗರ ಕ್ಷೇತ್ರ - ಕಾಂಗ್ರೆಸ್...

ಶಿವಮೊಗ್ಗ ನಗರ ಕ್ಷೇತ್ರ - ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ : ವೈ.ಹೆಚ್.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ11 Feb 2018 11:06 PM IST
share
  • ಶಿವಮೊಗ್ಗ ನಗರ ಕ್ಷೇತ್ರ - ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ : ವೈ.ಹೆಚ್.ನಾಗರಾಜ್
  • ಶಿವಮೊಗ್ಗ ನಗರ ಕ್ಷೇತ್ರ - ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ : ವೈ.ಹೆಚ್.ನಾಗರಾಜ್

ಶಿವಮೊಗ್ಗ, ಫೆ. 11: 'ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರ ಅಥವಾ ಶಿಕಾರಿಪುರ ವಿಧಾನಸಭಾ ಕ್ಷೇತ್ರದದಲ್ಲಿ ಕಣಕ್ಕಿಳಿಯಬೇಕೆಂಬ ಆಕಾಂಕ್ಷೆಯಿದೆ. ಈಗಾಗಲೇ ಈ ಕುರಿತಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದೆನೆ. ಆದರೆ ಟಿಕೆಟ್‍ಗೆ ಲಾಬಿ ನಡೆಸಲು ಹೋಗುವುದಿಲ್ಲ. ಒತ್ತಡವೂ ಹಾಕುವುದಿಲ್ಲ. ಪಕ್ಷದ ನಿರ್ಧಾರದಂತೆ ಮುನ್ನಡೆಯುತ್ತೆನೆ. ವರಿಷ್ಠರ ನಿರ್ಧಾರಕ್ಕೆ ಬದ್ದವಿರುತ್ತೆನೆ' ಎಂದು ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್.ನಾಗರಾಜ್ ತಿಳಿಸಿದ್ದಾರೆ. 

ಕಾಂಗ್ರೆಸ್ ಸೇವಾದಳಕ್ಕೆ ಕನಿಷ್ಠ 10 ಕ್ಷೇತ್ರದಲ್ಲಿಯಾದರೂ ಟಿಕೆಟ್ ನೀಡಬೇಕೆಂಬ ಮನವಿಯನ್ನು ಪಕ್ಷದ ವರಿಷ್ಠರಿಗೆ ಮಾಡಲಾಗಿದೆ. ಇದರಲ್ಲಿ ತಾವು ಕೂಡ ಓರ್ವ ಆಕಾಂಕ್ಷಿಯಾಗಿದ್ದೆನೆ. ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು, ಪಕ್ಷದ ತತ್ವ - ಸಿದ್ದಾಂತಗಳಿಗೆ ಬದ್ದನಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದೆನೆ ಎಂದು ಹೇಳಿದ್ದಾರೆ. 

ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಕಂಡುಬರುತ್ತಿದೆ. ಈ ಬಾರಿ ಜಿಲ್ಲೆಯ ಎಲ್ಲ ಏಳು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಜನಪರ ಆಡಳಿತ ಪಕ್ಷದ ಗೆಲುವಿಗೆ ಪೂರಕವಾಗಿರಲಿದೆ ಎಂದು ವೈ.ಹೆಚ್.ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ. 

ಹಲವರ ಪೈಪೋಟಿ: ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೋರಿ ಹಲವು ನಾಯಕರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಹಾಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹಾಗೂ ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ನೇತೃತ್ವದಲ್ಲಿ 11 ನಾಯಕರ ತಂಡವು ಟಿಕೆಟ್‍ಗೆ ತೀವ್ರ ಲಾಬಿ ನಡೆಸುತ್ತಿದೆ. ಹೆಚ್.ಎಂ.ಚಂದ್ರಶೇಖರಪ್ಪ ನೇತೃತ್ವದ ತಂಡವು ದೆಹಲಿ ಹಾಗೂ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ತಮ್ಮಗಳಲ್ಲಿಯೇ ಓರ್ವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದೆ. 

ಈ ನಡುವೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ, ವೀರಶೈವ ಸಮಾಜದ ಮುಖಂಡ ವೈ.ಹೆಚ್.ನಾಗರಾಜ್‍ರವರು ಕೂಡ ಟಿಕೆಟ್‍ಗೆ ರೇಸ್‍ಗೆ ಧುಮುಕಿದ್ದಾರೆ. ವೀರಶೈವ ಸಮಾಜಕ್ಕೆ ಪ್ರಾತಿನಿಧ್ಯ ಹಾಗೂ ಕಾಂಗ್ರೆಸ್ ಸೇವಾದಳ ಕೋಟಾದಡಿ ಟಿಕೆಟ್ ನೀಡುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದಾರೆ. ಶಿಕಾರಿಪುರ ಅಥವಾ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ತಮಗೆ ಅವಕಾಶ ಮಾಡಿಕೊಡುವಂತೆ ಕೋರಿಕೊಂಡಿದ್ದಾರೆಂಬ ಎಂಬ ಮಾಹಿತಿ ಕೇಳಿಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X