ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ ಎಂದ ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ, ಫೆ.12: ಕಾಶ್ಮೀರದ ಶೊಪಿಯಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮೇಜರ್ ಆದಿತ್ಯ ಕುಮಾರ್ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ವಿಧಿಸಿದ ಬಳಿಕ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆದಿತ್ಯ ಅವರ ತಂದೆ ಎಫ್ ಐಆರ್ ರದ್ದುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮೇಜರ್ ವಿರುದ್ಧದ ವಿಚಾರಣೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರ ಹಾಗು ಕೇಂದ್ರ ಸರಕಾರಕ್ಕೆ ಈ ಬಗ್ಗೆ ತಮ್ಮ ನಿಲುವನ್ನು ಸಲ್ಲಿಸುವಂತೆ ಸೂಚಿಸಿದೆ. ಇದಕ್ಕಾಗಿ 2 ವಾರಗಳ ಸಮಯ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯ್ ಸ್ವಾಮಿ ಎಫ್ ಐಆರ್ ಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನ ಅಭಿಪ್ರಾಯದ ನಂತರ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲೇಬೇಕು” ಎಂದಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ಕುರಿತು ಪ್ರತಿಕ್ರಿಯೆ ನೀಡಿರುವ ಮೇಜರ್ ಪರ ವಕೀಲೆ ಐಶ್ವರ್ಯಾ ಭಾಟಿ, “ಇಂದು ಸೇನೆಗೆ ಧನಾತ್ಮಕ ಹಾಗು ಪ್ರೋತ್ಸಾಹಕ ದಿನ” ಎಂದಿದ್ದಾರೆ.





