ಶಿವಮೊಗ್ಗ: ದೇವಾಲಯದಲ್ಲಿ ಕಳ್ಳತನ
ಶಿವಮೊಗ್ಗ, ಫೆ.12: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಿರುಪತಿ ಗ್ರಾಮದ ಉಗ್ರ ನರಸಿಂಹಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿರುವ ಘಟನೆ ವರದಿಯಾಗಿದೆ.
ವಿಜಯನಗರ ಅರಸರ ಕಾಲದಲ್ಲಿ ಈ ದೇವಾಲಯ ನಿರ್ಮಾಣ ಮಾಡಲಾಗಿತ್ತು. ಕಾಣಿಕೆ ಹುಂಡಿಯಲ್ಲಿದ್ದ ನಗದಿನ ಜೊತೆಗೆ ಪುರಾತನ ಕಾಲದ ವಿಗ್ರಹ ಮತ್ತಿತರ ಸಾಮಗ್ರಿಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story





