Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 17 ಮೂಳೆ ಮುರಿತಕ್ಕೊಳಗಾಗಿ ಜೀವನ್ಮರಣ...

17 ಮೂಳೆ ಮುರಿತಕ್ಕೊಳಗಾಗಿ ಜೀವನ್ಮರಣ ಹೋರಾಟ ನಡೆಸಿದ್ದ ಅಥ್ಲೀಟ್‌ಗೆ ಒಲಿಂಪಿಕ್ಸ್ ಪದಕ!

ವಾರ್ತಾಭಾರತಿವಾರ್ತಾಭಾರತಿ12 Feb 2018 9:06 PM IST
share
17 ಮೂಳೆ ಮುರಿತಕ್ಕೊಳಗಾಗಿ ಜೀವನ್ಮರಣ ಹೋರಾಟ ನಡೆಸಿದ್ದ ಅಥ್ಲೀಟ್‌ಗೆ ಒಲಿಂಪಿಕ್ಸ್ ಪದಕ!

ಪಿಯೊಂಗ್‌ಚಾಂಗ್(ದಕ್ಷಿಣಕೊರಿಯಾ), ಫೆ.12: ಹನ್ನೊಂದು ತಿಂಗಳ ಹಿಂದೆ ಸ್ನೋಬೋರ್ಡಿಂಗ್ ಘಟನೆಯಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದ ಕೆನಡಾದ ಮಾರ್ಕ್ ಮೆಕ್ ಮೊರಿಸ್ ರವಿವಾರ ನಡೆದ ಚಳಿಗಾಲದ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿ ವಿಶ್ವದ ಗಮನ ಸೆಳೆದಿದ್ದಾರೆ.

 24ರ ಹರೆಯದ ಮೆಕ್‌ಮೊರಿಸ್ 2017ರ ಮಾರ್ಚ್‌ನಲ್ಲಿ ಕೆನಡಾದಲ್ಲಿ ಫಿಲ್ಮ್ ಪ್ರಾಜೆಕ್ಟ್‌ಗೆ ಸಂಬಂಧಿಸಿದ ಕೆಲಸದಲ್ಲಿ ನಿರತವಾಗಿದ್ದ ಸಂದರ್ಭದಲ್ಲಿ ನಡೆದ ಭೀಕರ ಸ್ನೋ ಬೋರ್ಡಿಂಗ್ ಘಟನೆಯಲ್ಲಿ ಮರವೊಂದಕ್ಕೆ ಢಿಕ್ಕಿಯಾಗಿ ದವಡೆ, ಬಲಗೈ, ಕಿಡ್ನಿ ಹಾಗೂ ಪಕ್ಕೆಲುಬು ಸಹಿತ ದೇಹದ 17 ಭಾಗ ಮೂಳೆ ಮುರಿತಕ್ಕೊಳಗಾಗಿದ್ದಲ್ಲದೆ, ಶ್ವಾಸಕೋಶದ ಸಮಸ್ಯೆಗೆ ಸಿಲುಕಿ ಎರಡು ದಿನಗಳ ಕಾಲ ವೈದ್ಯಕೀಯ ಪ್ರೇರಿತ ಕೋಮಾದಲ್ಲಿದ್ದರು.

 ಜೀವನ್ಮರಣ ಹೋರಾಟದಲ್ಲಿ ಬದುಕುಳಿದ ಮೆಕ್ ಮೊರಿಸ್ ಪಿಯೊಂಗ್‌ಚಾಂಗ್ ವಿಂಟರ್ ಗೇಮ್ಸ್‌ನ ಪುರುಷರ ಸ್ನೋಬೋರ್ಡ್ ಸ್ಲೋಪ್‌ಸ್ಟೈಲ್‌ನಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ಕೆನಡಾದ ಮ್ಯಾಕ್ ಪ್ಯಾರೊಟ್ ಹಾಗೂ ಅಮೆರಿಕದ ರೆಡ್ ಗೆರಾರ್ಡ್ ಬೆಳ್ಳಿ ಹಾಗೂ ಚಿನ್ನ ಜಯಿಸಿದ್ದಾರೆ.

ಸಾವಿನ ದವಡೆಯಿಂದ ಪಾರಾಗಿ ಬಂದಿರುವ ಮೆಕ್‌ಮೊರಿಸ್ ಇದೀಗ ಕಂಚು ಜಯಿಸಿ ರಾತೋರಾತ್ರಿ ಮುಖಪುಟದ ಸುದ್ದಿಯಾಗಿದ್ದಾರೆ.

 ‘‘ಇಂದು ನಾನು ಹಳೆಯ ಘಟನೆಯನ್ನು ನೆನಪಿಸಿಕೊಳ್ಳಲು ಇಷ್ಟಪಡಲಾರೆ. ಇಂದು ಸ್ನೋ ಬೋರ್ಡ್‌ನಲ್ಲಿ ನಿಂತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. 8 ತಿಂಗಳ ಹಿಂದೆ ನನಗೆ ಸ್ನೋಬೋರ್ಡ್‌ನಲ್ಲಿರುತ್ತೇನೆಂದು ಯೋಚಿಸಿಯೇ ಇರಲಿಲ್ಲ. ಬದುಕುಳಿಯುವ ಭರವಸೆಯೂ ಇರಲಿಲ್ಲ. ನಾನು ಗೆದ್ದಿರುವ ಕಂಚು ನನ್ನ ಪಾಲಿಗೆ ಚಿನ್ನದ ಪದಕವಾಗಿದೆ’’ ಎಂದು ಮೆಕ್ ಮೊರಿಸ್ ಹೇಳಿದ್ದಾರೆ.

ಮೆಕ್ ಮೊರಿಸ್ 2014ರ ಸೋಚಿ ಒಲಿಂಪಿಕ್ಸ್‌ನಲ್ಲಿ ಕಂಚು ಜಯಿಸಿದ್ದರು. ‘ಮೆಕ್‌ಮೊರಿಸ್ ಸಾಧನೆ ಅದ್ಭುತ’ ಎಂದು ಅಮೆರಿಕದ ಸ್ಕೈ ಕ್ವೀನ್ ಲಿಂಡ್ಸೆ ವಾನ್ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X