Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಜಿಲ್ಲಾ ಯುವ ಕಾಂಗ್ರೆಸ್,...

ಚಾಮರಾಜನಗರ: ಜಿಲ್ಲಾ ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪಕೋಡ ತಯಾರಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Feb 2018 10:40 PM IST
share
ಚಾಮರಾಜನಗರ: ಜಿಲ್ಲಾ ಯುವ ಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪಕೋಡ ತಯಾರಿಸಿ ಪ್ರತಿಭಟನೆ

ಚಾಮರಾಜನಗರ, ಫೆ. 12: ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಇದುವರೆಗೆ ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದು, ಪದವಿ ಪಡೆದವರು ಬೀದಿಪಾಲಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ಜಂಟಿಯಾಗಿ ಭುವನೇಶ್ವರಿ ವೃತ್ತದಲ್ಲಿ ಶನಿವಾರ ಪಕೋಡ ತಯಾರಿಸಿ ಹಂಚುವ ಮೂಲಕ ಪ್ರತಿಭಟನೆ ನಡೆಸಿತು. 

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೈರಾಜ್ ನೇತೃತ್ವದಲ್ಲಿ ಜಮಾಯಿಸಿದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ, ಪಕೋಡ ಅಂಗಡಿ ಇಟ್ಟು ಮಾರಾಟ ಮಾಡುತ್ತಿರುವ ಭಿತ್ತ ಪತ್ರವನ್ನು ಪ್ರದರ್ಶನ ಮಾಡಿ, ಕೇಂದ್ರ ಸರ್ಕಾರ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಭುನವೇಶ್ವರಿ ವೃತ್ತ ತಲುಪಿದರು. ಬಳಿಕ ಮೆರವಣಿಗೆಯಲ್ಲಿ ಬಿಜೆಪಿ ಕಚೇರಿಗೆ ತೆರಳಿ ಮಾರಾಟ ಮಾಡಲು ಯತ್ನಿಸಿದ ವೇಳೆ ಪೊಲೀಸರು ಮಾರ್ಗಮಧ್ಯೆ ನಗರದ  ಪಟ್ಟಣ ಠಾಣೆಯ ಬಳಿ ತಡೆದು ಎಲ್ಲರನ್ನು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು. 

ಇದಕ್ಕೂ ಮುನ್ನಾ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೆರಾಜ್, ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗುತ್ತಿದ್ದು, ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ  ಯುವ ಜನಾಂಗಕ್ಕೆ ಉದ್ಯೋಗ  ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೇವಲ ಜನರನ್ನು ಮರಳು ಮಾಡುವ ಕಲೆಯನ್ನು ನರೇಂದ್ರ ಮೋದಿ ಚೆನ್ನಾಗಿ ಕರಗತ ಮಾಡಿಕೊಂಡಿದ್ದಾರೆ. ಈಗಾಗಲೇ ಉದ್ಯೋಗ ದೊರೆಯದೆ ಪದವಿ ಪಡೆದುಕೊಂಡಿರುವ ಲಕ್ಷಾಂತರ ಮಂದಿ ಯುವಕರು ಬೀದಿಗೆ ಬಿದ್ದಿದ್ದಾರೆ. ಪುಟ್‍ಪಾತ್‍ನಲ್ಲಿ ಪಕೋಡ ಮಾರುವ ಪರಿಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ದೂರಿದರು. 

ಇದೇ ರೀತಿ ಕೇಂದ್ರ ಸರ್ಕಾರ ಯುವ ಜನಾಂಗಕ್ಕೆ ಉದ್ಯೋಗ ಕಲ್ಪಿಸಲು ವಿಫಲರಾದರೆ ನಿರುದ್ಯೊಗ ಸಮಸ್ಯೆ ಹೆಚ್ಚಾಗಿ ಜನರು ಬದುಕುವುದೇ ಕಷ್ಟವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಈಗಾಲಾದರೂ ಎಚ್ಚೆತ್ತುಕೊಂಡು ಉದ್ಯೋಗ ಸೃಷ್ಟಿ ಮಾಡಲು ಮುಂದಾಗಬೇಕು. ಮಾತು ಕಡಿಮೆ ಮಾಡಿ ಕೆಲಸದ ಕಡೆ ಹೆಚ್ಚು ನಿಗಾ ವಹಿಸಬೇಕು ಎಂಬುವುದು ಯುವ ಕಾಂಗ್ರೆಸ್ ಒತ್ತಾಯವಾಗಿದೆ. ಯುವಶಕ್ತಿ ಸಂಘಟನೆಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರಸ್ ಮುಕ್ತ ಭಾರತ ಮಾಡುವುದಿರಲಿ, ತಾವೇ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ ಎಂದು ಚೇತನ್ ದೊರೆರಾಜ್ ತಿಳಿಸಿದರು. 

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶಿವಶಂಕರ್, ಜಿಲ್ಲಾ ಉಪಾಧ್ಯಕ್ಷ ಗರನಹಳ್ಳಿ ಮಧುಸೂಧನ್, ಮುಸೀಬ್, ವಿದಾನಸಭಾ ಕ್ಷೇತ್ರಗಳ ಅಧ್ಯಕ್ಷರಾದ ಚಾ.ನಗರ ಶ್ರೀಕಾಂತ್, ಕೊಳ್ಳೇಗಾಲ ಅಬ್ದುಲ್, ಹನೂರು ಅಮೀನ್, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಆಶೋಕ್, ಗಿರೀಶ್, ಮನು, ಮಾಧೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜಯಣ್ಣ, ಪ್ರಧಾನ ಕಾರ್ಯಧರ್ಶಿ ಮಲ್ಲಾಜಮ್ಮ, ಕಾವೇರಿ ಶಿವಕುಮಾರ್, ನಾಗರತ್ನ ಮೊದಲಾದವರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X