Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರ ನೆಮ್ಮದಿಯ ಜೀವನಕ್ಕಾಗಿ ಸರಕಾರ...

ಜನರ ನೆಮ್ಮದಿಯ ಜೀವನಕ್ಕಾಗಿ ಸರಕಾರ ಶ್ರಮಿಸುತ್ತಿದೆ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ12 Feb 2018 11:02 PM IST
share
ಜನರ ನೆಮ್ಮದಿಯ ಜೀವನಕ್ಕಾಗಿ ಸರಕಾರ ಶ್ರಮಿಸುತ್ತಿದೆ: ಸಚಿವ ಯು.ಟಿ.ಖಾದರ್

ಉಳ್ಳಾಲ, ಫೆ. 12: ಸಮಾಜದ ಜನರು ನೆಮ್ಮದಿಯ ಜೀವನ ನಡೆಸುವುದಕ್ಕಾಗಿ ಸರಕಾರ ಹಕ್ಕುಪತ್ರ ನೀಡುವ ಮೂಲಕ ಬದುಕಿಗೊಂದು ಭದ್ರ ನೆಲೆ ಒದಗಿಸಿದೆ. ಮುಂದಿನ ಪೀಳಿಗೆಗೆ ಬೆಳೆಬಾಳುವ ಒಂದು ಸಂಪತ್ತಾಗಿ ಅವರು ಉನ್ನತ ಶಿಕ್ಷಣ ಪಡೆದು ಒಂದು ಕ್ರಾಂತಿಕಾರಿ ಬದಲಾವಣೆ ತರುವ ಕಾರ್ಯ ಆಗಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಅವರು ತಲಪಾಡಿ ಗ್ರಾಮದ ಪಿಲಿಕೂರು ಬಳಿ ತಲಪಾಡಿ ಮತ್ತು ಕಿನ್ಯ ಗ್ರಾಮದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಸರಕಾರ ನೀಡುವ ಹಕ್ಕುಪತ್ರ ಮುಂದಿನ ದಿನಗಳಲ್ಲಿ ಇದರ ಮೌಲ್ಯ ದುಪ್ಪಾಟ್ಟಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ಈ ಹಕ್ಕು ಪತ್ರಗಳನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ತೆಗೆದುಕೊಳ್ಳುವ ಕಾರ್ಯ ಮಾಡಬಾರದು ಮುಂದಿನ ದಿನಗಳಲ್ಲಿ ಈ ಹಕ್ಕು ಪತ್ರ ಮಕ್ಕಳಿಗೆ ಒಂದು ಸಂಪತ್ತಾಗಿದ್ದು ಆದನ್ನು ಜತನದಲ್ಲಿ ಕಾಯುವ ಕೆಲವನ್ನು ಮಾಡಬೇಕು ಎಂದರು.

ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರಕಾರ ಇರುವಾಗ ಹಕ್ಕುಪತ್ರ ನೀಡಿತ್ತು ಇದೀಗ ಸಿದ್ದರಾಮಯ್ಯರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ನೀಡಲಾಗುತ್ತಿದೆ. ಮಂಗಳೂರು ಕ್ಷೇತ್ರದಲ್ಲಿ ಇದರೊಂದಿಗೆ ಅನ್ನಭಾಗ್ಯ, ಮಕ್ಕಳಿಗೆ ಸಮವಸ್ತ್ರ, ಶೂಭಾಗ್ಯ ಸೇರಿದಂತೆ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡು ತ್ತಿದ್ದು, ಈ ಅವಧಿಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಮುಂದಿನ ಅವಧಿಯಲ್ಲಿ 24 ಗಂಟೆ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು ಎಂದರು.

ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸೋಮೇಶ್ವರ ಗ್ರಾಮ ಪಂಚಾಯತ್‌ನ 278 ಫಲಾನುಭವಿಗಳಿಗೆ, ಕೋಟೆಕಾರು ಗ್ರಾಮ ಪಂಚಾಯತ್‌ನ 296 ಫಲಾನುಭವಿಗಳಿಗೆ, ತಲಪಾಡಿ ಗ್ರಾಮ ಪಂಚಾಯತ್‌ನ 305 ಫಲಾನುಭವಿಗಳಿಗೆ ಮತ್ತು ಕಿನ್ಯ ಗ್ರಾಮದ 233 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.

ಕಾಂಗ್ರೆಸ್ ಅಲ್ಪ ಸಂಖ್ಯಾತ ಜಿಲ್ಲಾಧ್ಯಕ್ಷ ಎನ್.ಎಸ್. ಕರೀಂ, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯರಾದ ಸಿದ್ಧಿಖ್ ತಲಪಾಡಿ, ಸುರೇಖಾ ಚಂದ್ರಹಾಸ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಮುಸ್ತಾಫ, ಸಂಘಟನಾ ಕಾರ್ಯದರ್ಶಿ ಸಲೀಂ ಮೇಘಾ, ಕಿನ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ನಾರಾಯಣ ಪೂಜಾರಿ, ಉಪಾಧ್ಯಕ್ಷ ಸಿರಾಜ್ ಕಿನ್ಯ, ಸದಸ್ಯರಾದ ಅಬ್ಬುಸಾಲಿ ಕಿನ್ಯ, ಹಮೀದ್ ಕಿನ್ಯ, ಮಹಾಬಲ ಪೂಂಜಾ, ಫಾರೂಕು ಕಿನ್ಯ, ಫಯಾಝ್, ತಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ವೈಭವ್, ವಿನು, ಝುಬುನ್ನಿಸಾ, ಬಿ.ಎಸ್.ಇಸ್ಮಾಯಿಲ್, ಸಲಾಂ, ಇಬ್ರಾಹಿಂ, ಮಕ್ಯಾರ್ ಅಬ್ದುಲ್ ಖಾದರ್, ಫಯಾಝ್, ಸಚ್ಚಿದಾನಂದ ಭಂಡಾರಿ, ಮಾಜಿ ಅಧ್ಯಕ್ಷ ಖಾದರ್ ತಲಪಾಡಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X