ಫೆ. 13: ಬೆಂಗ್ರೆಯಲ್ಲಿ ಯುನಿವೆಫ್ ವತಿಯಿಂದ 'ಪ್ರವಾದಿ ಸಂದೇಶ ಕಾರ್ಯಕ್ರಮ'
ಮಂಗಳೂರು, ಫೆ. 12: ರಾಷ್ಟ್ರೀಯತೆ, ಜಾತ್ಯಾತೀತತೆ ಹಾಗೂ ಸ್ವಚ್ಛತೆ ಮತ್ತು ಪ್ರವಾದಿ ಮುಹಮ್ಮದ್(ಸ) ಎಂಬ ವಿಷಯದಲ್ಲಿ ಯುನಿವೆಫ್ ಕರ್ನಾಟಕ ಆಯೋಜಿಸಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಎಂಬ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮವು ಬೆಂಗ್ರೆಯ ಮುಖ್ಯ ರಸ್ತೆಯಲ್ಲಿ ಫೆ. 13ರಂದು ರಾತ್ರಿ 8.30ಕ್ಕೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅವರು 'ಮುಸ್ಲಿಮ್ ಸಮುದಾಯಕ್ಕೆ ಪ್ರವಾದಿ ಮುಹಮ್ಮದ್ (ಸ)' ರ ಸಂದೇಶ ಎಂಬ ವಿಷಯದಲ್ಲಿ ಪ್ರವಚನ ನೀಡಲಿದ್ದಾರೆ ಎಂದು ಬೆಂಗ್ರೆ ಶಾಖಾ ಸಂಚಾಲಕ ಇಫ್ರಾಝ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





