ಜೂಜಾಟ: ಐವರು ಆರೋಪಿಗಳ ಬಂಧನ

ಬೆಂಗಳೂರು, ಫೆ. 13: ಹಣವನ್ನು ಪಣಕ್ಕಿಟ್ಟು ಅದೃಷ್ಟದ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 95 ಸಾವಿರ ರೂ.ನಗದು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಶ್ರೀನಿವಾಸ್(42), ನರಸಿಂಹಲು(50), ಶ್ರೀನಿವಾಸಲು(45), ಶಿವಕುಮಾರ್(40) ಹಾಗೂ ಬಾಷಾ(55) ಎಂದು ಗುರುತಿಸಲಾಗಿದೆ. ಆರೋಪಿಗಳ ಇಲ್ಲಿನ ನ್ಯೂ ಬಿಇಎಲ್ ರಸ್ತೆಯ ಮೋರ್ ಸೂಪರ್ ಮಾರ್ಕೆಟ್ ಬಳಿಯ ಕರ್ನಾಟಕ ಬೆಡ್ಡಿಂಗ್ ಸೆಂಟರ್‌ನಲ್ಲಿ ಜೂಜಾಟ ಆಡುತ್ತಿದ್ದರು ಎಂದು ಹೇಳಲಾಗಿದೆ.
ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಜೂಜಾಟಕ್ಕೆ ಪಣಕ್ಕಿಟ್ಟಿದ್ದ 95 ಸಾವಿರ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಂಜಯ ನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
Next Story





