ಬೆಳ್ತಂಗಡಿ: ಅತ್ಯಾಚಾರ ಯತ್ನ ಪ್ರಕರಣದ ಆರೋಪಿ ಸೆರೆ

ಬೆಳ್ತಂಗಡಿ, ಫೆ. 13: ಧರ್ಮಸ್ಥಳ ಸಮೀಪ ಕಲ್ಮಂಜ ಎಂಬಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದ ಪ್ರಕರಣದ ಪ್ರಮುಖ ಆರೋಪಿ ರೆಜೀಶ್ ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ರೆಜೀಶ್ ಹಾಗೂ ಆತನ ಸ್ನೇಹಿತ ಸೇರಿಕೊಂಡು ವಾರದ ಹಿಂದೆ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಬಲವಂತವಾಗಿ ರಿಕ್ಷಾಕ್ಕೆ ಹತ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಬಾಲಕಿ ಬೊಬ್ಬೆ ಹೊಡೆದು ಅವರಿಂದ ತಪ್ಪಿಸಿಕೊಂಡಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆಯ ಬಳಿಕ ರೆಜೀಶ್ ನಾಪತ್ತೆಯಾಗಿದ್ದ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಅತ್ಯಾಚಾರಕ್ಕೆ ಯತ್ನ ಹಾಗೂ ದಲಿತ ದೌರ್ಜ್ಯನ್ಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Next Story





