ಶಿವಮೊಗ್ಗ: ಗಾಂಜಾ ಮಾರಾಟ; ಓರ್ವನ ಬಂಧನ

ಶಿವಮೊಗ್ಗ, ಫೆ. 13: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಗರದ ನವುಲೆ ತ್ರಿಮೂರ್ತಿ ನಗರದ ರಾಗಿಗುಡ್ಡ ಕ್ರಾಸ್ ಬಳಿ ನಡೆದಿದೆ.
ಟಿಪ್ಪುನಗರ ಬಡಾವಣೆಯ ನಿವಾಸಿ, ಆಟೋ ಚಾಲಕ ಇಮ್ರಾನ್ ಪಾಷಾ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. 40 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





