ಚಿನ್ನದ ಸರ ಎಳೆದೊಯ್ದು ಪರಾರಿ
ಮಂಗಳೂರು, ಫೆ.13: ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಕುತ್ತಿಗೆಯಿಂದ 2 ಪವನ್ ತೂಕದ ಚಿನ್ನದ ಸರ ಎಳೆದೊಯ್ದು ಪರಾರಿಯಾದ ಘಟನೆ ನಗರದ ಪಿವಿಎಸ್ ವೃತ್ತದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಪಿವಿಎಸ್ ವೃತ್ತದ ಬಳಿ ಇರುವ ಜಿಮ್‌ನಲ್ಲಿ ಉದ್ಯೋಗಿಯಾಗಿರುವ ಕಂದುಕ ನಿವಾಸಿ ಸುಂದರಿ ಎಂಬವರು ಕಚೇರಿಗೆ ತೆರಳುತ್ತಿದ್ದಾಗ ಹೆಲ್ಮೆಟ್ ಧರಿಸಿದ ಯುವಕರಿಬ್ಬರು ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ, ಏಕಾಏಕಿ ಕುತ್ತಿಗೆಗೆ ಕೈ ಹಾಕಿ ಹಳೆಯ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿ ಯಾಗಿದ್ದಾರೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





