ಚಾಮರಾಜನಗರ: ಮಹಾಶಿವರಾತ್ರಿ ಪ್ರಯುಕ್ತ ಶಾಸಕರಿಂದ ವಿಶೇಷ ಪೂಜೆ

ಚಾಮರಾಜನಗರ,ಫೆ.13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜೆಗಳು ನಡೆಯುತ್ತಿದ್ದು, ಚಾಮರಾಜನಗರ ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನಕ್ಕೆ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಭಕ್ತರಿಗೆ ಅತ್ಯಂತ ಸಂಭ್ರಮ ಉಂಟು ಮಾಡಿದೆ. ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು, ಇದರಿಂದಾಗಿ ರೈತರಿಗೆ ಒಳ್ಳೆಯದಾಗಿದೆ. ಮುಂದೆಯೂ ಸಹ ದೇವರ ಕೃಪೆಯಿಂದಾಗಿ ಮಳೆ, ಬೆಳೆ ಸಕಾಲಕ್ಕೆ ಆಗುವ ಮೂಲಕ ಜನಸಾಮಾನ್ಯರು ಸುಖ ಸಮೃದ್ಧಿಯಿಂದ ಬಾಳುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಕನಿಷ್ಠ ವೇತನ ಸಹಲಾ ಮಂಡಲಿ ಅಧ್ಯಕ್ಷ ಉಮೇಶ್ ಹಾಗೂ ಭಕ್ತಾಧಿಗಳು, ಗ್ರಾಮದ ಮುಖಂಡರುಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.
Next Story





