Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ...

ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದವರ ಸೆರೆ

ವಾರ್ತಾಭಾರತಿವಾರ್ತಾಭಾರತಿ14 Feb 2018 9:19 PM IST
share
ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದವರ ಸೆರೆ

ಬೆಂಗಳೂರು,ಫೆ.14: ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ಪಡೆದು ವಂಚನೆ ಮಾಡುತ್ತಿದ್ದ ಇಬ್ಬರನ್ನು ಆಗ್ನೇಯ ವಿಭಾಗದ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ನಾತಕೋತ್ತರ(ಪಿಜಿ) ಸೀಟು ಕೊಡಿಸುವುದಾಗಿ ನಂಬಿಸುತ್ತಿದ್ದ ನಗರದ ಎಲೆಕ್ಟ್ರಾನಿಕ್ ಸಿಟಿಯ ಡ್ಯಾಡೀಸ್ ಎಲಿಕ್ಸರ್ ಅಪಾರ್ಟ್‌ಮೆಂಟ್‌ನ ರಜತ್ ಶೆಟ್ಟಿ(31) ಹಾಗೂ ಕೊಡಿಗೆಹಳ್ಳಿಯ ಜಯಪ್ರಕಾಶ್ ಸಿಂಗ್(31) ಬಂಧಿತ ಆರೋಪಿಗಳು ಎಂದು ಗುರುತಿಸಿದ್ದು, ಅವರಿಂದ 1.3 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿಟಿಎಂ ಲೇಔಟ್‌ನ 2ನೆ ಹಂತದಲ್ಲಿ ಗ್ಲೋಬಲ್ ಲರ್ನಿಂಗ್ ಅಂಡ್ ಎಜುಕೇಷನ್ ಕನ್ಸಲ್ಟೆನ್ಸಿ ಕಚೇರಿ ತೆಗೆದು ಸೀಟು ಕೊಡಿಸುವುದಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದರು. ಆರೋಪಿಗಳಿಂದ ವಂಚನೆಗೊಳಗಾದ ಸುದರ್ಶನ್, ಸಂದೀಪ್ ಹಾಗೂ ರಾಹುಲ್ ಕುಮಾರ್ ಎಂಬುವವರು ನೀಡಿದ್ದ ದೂರು ದಾಖಲಿಸಿ ತನಿಖೆ ಕೈಗೊಂಡ ಮೈಕೋ ಲೇಔಟ್ ಪೊಲೀಸ್ ಇನ್ಸ್‌ಪೆಕ್ಟರ್ ಆರ್.ಎಂ.ಅಜಯ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಲ್ಲಿ ರಜತ್ ಶೆಟ್ಟಿ ಕುಂದಾಪುರ ಮೂಲದವನಾಗಿದ್ದು, ಬಿಇ ಪದವೀಧರನಾಗಿದ್ದಾನೆ. ಮಣಿಪಾಲ್‌ನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ಹಲವರಿಗೆ ವಂಚಿಸಿದ್ದ. ಈ ಸಂಬಂಧ 2013 ರಲ್ಲಿ ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ 8 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿವೆ.

ಇನ್ನೊಬ್ಬ ಆರೋಪಿ ಜಯಪ್ರಕಾಶ್ ಸಿಂಗ್ ಜಾರ್ಖಂಡ್‌ನ ಧನ್ ಭಾಗ್ ಮೂಲದವನಾಗಿದ್ದು, ಬಿಬಿಎಂ ಪದವೀಧರನಾಗಿದ್ದಾನೆ. ಈತನ ವಿರುದ್ಧ ಸಂಜಯ್ ನಗರ ಹಾಗೂ ಕೊಡಿಗೆಹಳ್ಳಿ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಬಂಧಿತ ಜಯಪ್ರಕಾಶ್ ಸಿಂಗ್ ಅತ್ತೆ, ಮಾವನ ಹೆಸರಿನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಮುಂಗಡವಾಗಿರಿಸಿಕೊಂಡಿದ್ದ 50 ಲಕ್ಷ ರೂ. ಹಾಗೂ ಉಳಿತಾಯ ಖಾಯೆಯಲ್ಲಿದ್ದ 12 ಲಕ್ಷ ರೂ. ಮತ್ತು ಅಪಾರ್ಟ್‌ಮೆಂಟ್‌ವೊಂದು ಖರೀದಿ ಮಾಡಲು ಆರೋಪಿ ರಜತ್‌ಶೆಟ್ಟಿ ಮುಂಗಡವಾಗಿ ನೀಡಿದ್ದ 20 ಲಕ್ಷ ರೂ.ಗಳ ಜೊತೆಗೆ ಖಾಸಗಿಯವರಿಗೆ ನೀಡಿದ್ದ 9.45 ಲಕ್ಷ ರೂ. ಮತ್ತು ಷೇರುಗಳಲ್ಲಿ ತೊಡಗಿಸಿದ್ದ 12.5 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಅಲ್ಲದೆ, ಬಲೋನಾ ಕಾರು, ರಾಯಲ್ ಎನ್‌ಫೀಲ್ಡ್ ಬೈಕ್, 3 ಲಕ್ಷ ರೂ. ಬೆಲೆಯ ಚಿನ್ನಾಭರಣ, ಲ್ಯಾಪ್‌ಟಾಪ್ ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ನಗರದ ವಿವಿಧೆಡೆ ಜೆ.ಪಿ. ಕನ್ಸಲ್ಟೆನ್ಸಿ, ನಾರಾಯಣ ಕನ್ಸಲ್ಟೆನ್ಸಿ, ಐಆರ್‌ಎಸ್ ಕನ್ಸಲ್ಟೆನ್ಸಿ ಇನ್ನಿತರ ಹೆಸರುಗಳಲ್ಲಿ 5 ಕಚೇರಿಗಳನ್ನು ತೆರೆದು ವೈದ್ಯಕೀಯ ಸೀಟು ಕೊಡಿಸುವುದಾಗಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಗಳ ವಂಚನೆ ನಡೆಸಿ, ವಿದೇಶ ಪ್ರಯಾಣ ಮಾಡಿ, ಮೋಜು ಮಸ್ತಿ ಮಾಡುತ್ತಾ ವಿಲಾಸಿ ಜೀವನ ನಡೆಸುತ್ತಿರುವುದು ತನಿಖೆಯಲ್ಲಿ ಕಂಡು ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್  ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X