Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನ ಸಾಮಾನ್ಯರ ಅಭಿಪ್ರಾಯಗಳಿಗೆ...

ಜನ ಸಾಮಾನ್ಯರ ಅಭಿಪ್ರಾಯಗಳಿಗೆ ಅವಕಾಶವಿರಲಿ: ಪ್ರಹ್ಲಾದ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ14 Feb 2018 9:26 PM IST
share
ಜನ ಸಾಮಾನ್ಯರ ಅಭಿಪ್ರಾಯಗಳಿಗೆ ಅವಕಾಶವಿರಲಿ: ಪ್ರಹ್ಲಾದ್ ಜೋಶಿ

ಧಾರವಾಡ, ಫೆ.14: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಹಾಗೂ ಜನಸಾಮಾನ್ಯರ ಬೇಡಿಕೆ ಮತ್ತು ಅಭಿಪ್ರಾಯಗಳಿಗೆ ಸ್ಪಂದಿಸಿ ಅವರ ಭಾಗವಹಿಸುವಿಕೆಗೆ ಅವಕಾಶ ಮಾಡಿ ಕೊಡಬೇಕೆಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಮಹಾನಗರ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ)ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರ ನಗರ ಹಾಗೂ ಗ್ರಾಮೀಣಾಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ನಗರ ವಿಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಬಹುಮುಖ್ಯವಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಹಾಗೂ ಯೋಜನೆ ಅನುಷ್ಠಾನ ಆಗಿಲ್ಲ. ಯೋಜನೆಯ ರೂಪರೇಷೆಯನ್ನು ರೂಪಿಸುವಾಗ ಸರಿಯಾಗಿ ಜನ ಪ್ರತಿನಿಧಿಗಳ ಹಾಗೂ ಜನರ ಅಭಿಪ್ರಾಯ ಪಡೆದಿಲ್ಲ ಎಂದು ಅವರು ಹೇಳಿದರು.

ತ್ಯಾಜ್ಯ ವಿಲೇವಾರಿ ಘಟಕ, ಸಾರಿಗೆ ವ್ಯವಸ್ಥೆ, ಉದ್ಯಾನವನ, ಕೆರೆಗಳ ಕಾಮಗಾರಿ ಮತ್ತು ಬಸ್ ನಿಲ್ದಾಣ ಮತ್ತು ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಳವಡಿಸಿಕೊಂಡಿರುವ ನೂತನ ತಂತ್ರಜ್ಞಾನ ಹಾಗೂ ಯೋಜನೆಗಳ ಕುರಿತು ಮಹಾನಗರ ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ವಿವರಿಸಿದರು. ಜನರಿಗೆ ಅನುಕೂಲವಾಗುವ ಮತ್ತು ನಮ್ಮ ಸಂಸ್ಕೃತಿ ಪರಂಪರೆಯನ್ನು ಸಂಕೇತಿಸುವ ವಿನ್ಯಾಸವನ್ನು ಅಳವಡಿಸುವ ಮೂಲಕ ಕಟ್ಟಡ, ಉದ್ಯಾನವನಗಳನ್ನು ನಿರ್ಮಿಸಬೇಕು. ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಳಂಬ ಮಾಡುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ಕೇಂದ್ರ ಸರಕಾರ ನೀಡಿರುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಮಾಡಿದ ಪ್ರಹ್ಲಾದ್ ಜೋಶಿ, ವಸತಿ, ಕಡಿಯುವ ನೀರು ಮತ್ತು ಕೃಷಿ ಕಲ್ಯಾಣ ಕಾರ್ಯಕ್ರಮಗಳು ತೃಪ್ತಿಕರವಾಗಿ ಜಾರಿಯಾಗಿಲ್ಲ. ಗ್ರಾಮೀಣ ಭಾಗದಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದ ಅಧಿಕಾರಿಗಳು ಉದಾಸೀನತೆ ತೋರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನರೇಗಾ, ಪಿ.ಎಂ.ಎ.ವೈ.ಜೆ, ಆಧಾರ್, ಸ್ವಚ್ಛಭಾರತ ಮಿಷನ್, ಪಿ.ಎಂ.ಜಿ.ಎಸ್.ವೈ, ರಾಷ್ಟ್ರೀಯ ಸುರಕ್ಷತಾ ಯೋಜನೆ ಮುಂತಾದವುಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕೆಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್, ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ, ಉಪಕಾರ್ಯದರ್ಶಿ ಎಸ್.ಜಿ.ಕೊರವರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X