Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ...

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಮೂವರ ವಿರುದ್ಧ ದೂರು, ಓರ್ವನ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Feb 2018 10:51 PM IST
share
ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಪುತ್ತೂರು, ಫೆ. 14: ಪರಿಶಿಷ್ಟ ಜಾತಿಯ ಯುವತಿಯೊಬ್ಬಳನ್ನು ವಿವಾಹವಾಗುವುದಾಗಿ ನಂಬಿಸಿ ಓರ್ವ ಯುವಕ ಹಾಗೂ ಆತನ ಇಬ್ಬರು ಸ್ನೇಹಿತರು ದೈಹಿಕ ಸಂಬಂಧ ಬೆಳೆಸಿದ ಪರಿಣಾಮ ಇದೀಗ ಆಕೆ 8 ತಿಂಗಳ ಗರ್ಭವತಿಯಾಗಿದ್ದು, ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ  ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೂವರ ಪೈಕಿ ಪ್ರಮುಖ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ಥೆಯನ್ನು ಪುತ್ತೂರು ತಾಲ್ಲೂಕಿನ ಸರ್ವೆ ಗ್ರಾಮದ ತೌಡಿಂಜೆಯ 24 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಮುಂಡೂರು ಗ್ರಾಮದ ಕಡ್ಯ ನಿವಾಸಿ  ದಿನೇಶ್ ಗೌಡ ಹಾಗೂ ಆತನ ಸ್ನೇಹಿತರಾದ ಸಂತೋಷ್ ಗೌಡ ಮತ್ತು ಸತೀಶ್ ಶೆಟ್ಟಿ ಆರೋಪಿಗಳು.

ಯುವತಿಯ ತಂದೆ ಮತ್ತು ತಾಯಿ 10 ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಆಕೆ ತನ್ನ ಸಹೋದರ ಜೊತೆ ವಾಸ್ತವ್ಯವಿದ್ದರು. ಆರೋಪಿಗಳ ಪೈಕಿ ದಿನೇಶ್ ಗೌಡ 2016ರ ಜುಲೈ ತಿಂಗಳಲ್ಲಿ ಯುವತಿಯ ಸ್ನೇಹ ಬೆಳೆಸಿಕೊಂಡು ಆಕೆಯನ್ನು ವಿವಾಹವಾಗುವುದಾಗಿ ನಂಬಿಸಿ ಕಳೆದ ಒಂದೂವರೆ ವರ್ಷದಿಂದ ಅಕ್ರಮ ದೈಹಿಕ ಸಂಬಂಧ ಬೆಳೆಸಿರುವುದಾಗಿ ಆರೋಪಿಸಲಾಗಿದೆ. ಈ ನಡುವೆ ಆತನ ಸ್ನೇಹಿತರಾದ ಸಂತೋಷ್ ಗೌಡ ಮತ್ತು ಸತೀಶ್ ಶೆಟ್ಟಿ ಎಂಬವರು ಕೂಡ ಆಕೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. 

ಯುವತಿ  ಗರ್ಭವತಿಯಾದ ಹಿನ್ನೆಲೆಯಲ್ಲಿ ಆರೋಪಿಗಳು ಕಳೆದ ನವಂಬರ್ ತಿಂಗಳಲ್ಲಿ ಆಕೆಯನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಲು ಪ್ರಯತ್ನಿಸಿದ್ದರೂ ಅಲ್ಲಿ ವೈದ್ಯರು ಸಿಗದ ಕಾರಣದಿಂದ ಅವರ ಪ್ರಯತ್ನ ವಿಫಲವಾಗಿತ್ತು ಎಂದು ತಿಳಿದು ಬಂದಿದೆ. ಇದೀಗ ಯುವತಿ  8 ತಿಂಗಳ ಗರ್ಭವತಿಯಾಗಿದ್ದಾರೆ.

ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಸಂಪ್ಯ ಪೊಲೀಸರು ಆರೋಪಿಗಳ ಪೈಕಿ ದಿನೇಶ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರು ಅವರಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

ನ್ಯಾಯಕ್ಕಾಗಿ ಆಗ್ರಹ- ಪ್ರತಿಭಟನೆಯ ಎಚ್ಚರಿಕೆ

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬುಧವಾರ ಸಂಜೆ ಸಂಪ್ಯ ಠಾಣೆಯ ಮುಂದೆ ಜಮಾಯಿಸಿ ಯುವತಿಗೆ ನ್ಯಾಯ ಒದಗಿಸಿ ಕೊಡುವಂತೆ ಪೊಲೀಸರನ್ನು ಆಗ್ರಹಿಸಿದರು, ನ್ಯಾಯ ಸಿಗದಿದ್ದಲ್ಲಿ ಉಗ್ರ ಹೋರಾಟಕ್ಕೆ ಇಳಿಯುವ ಎಚ್ಚರಿಕೆಯನ್ನು ಈ ಸಂಘಟನೆಗಳ ಮುಖಂಡರು ನೀಡಿದ್ದಾರೆ.

ದಲಿತ್ ಸೇವಾ ಸಮಿತಿಯ ಪುತ್ತೂರು ತಾಲ್ಲೂಕು ಅಧ್ಯಕ್ಷ ರಾಜು ಹೊಸ್ಮಠ, ಉಪಾಧ್ಯಕ್ಷ ಮನೋಹರ್ ಕೋಡಿಜಾಲು, ತಾಲ್ಲೂಕು ಕಾರ್ಯದರ್ಶಿ ಸುಮಿತ್ರಾ ಪುರುಷರಕಟ್ಟೆ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಉದಯ ಕುಮಾರ್ ಎರಕ್ಕಲ, ತಾಲ್ಲೂಕು ಸಂಚಾಲಕ ಗಣೇಶ್ ಕಾರೆಕ್ಕಾಡ್, ತಾಲ್ಲೂಕು ಸಂಘಟನಾ ಸಂಚಾಲಕ ನಿಶಾಂತ್ ಮುಂಡೋಡಿ, ದಲಿತ್ ಸೇವಾ ಸಮಿತಿಯ ಪ್ರಮುಖರಾದ ಶಾಂತಪ್ಪ ಭಕ್ತಕ್ಕೋಡಿ, ರಮೇಶ್ ಭಕ್ತಕ್ಕೋಡಿ, ಉಮೇಶ್ ಭಕ್ತಕ್ಕೋಡಿ, ರವಿ ಮಡಿಕೇರಿ, ಸುರೇಶ್ ಪುರುಷರಕಟ್ಟೆ , ಅಂಬೆಡ್ಕರ್ ತತ್ವ ರಕ್ಷಣಾ ವೇದಿಕೆಯ ಮುಖಂಡ ಗಿರಿಧರ್ ನಾಯಕ್ ಮತ್ತಿತರರು ಠಾಣೆಯ ಮುಂದೆ ಜಮಾಯಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X