ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿವಿಧ ಯೋಜನೆಗಳ ಜಾರಿ
ರಾಜ್ಯ ಬಜೆಟ್-2018

ಬೆಂಗಳೂರು,ಫೆ.16: ಶುಕ್ರವಾರ ವಿಧಾನಸೌಧದಲ್ಲಿ ಸಿ.ಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಜಾರಿಗೊಳಿಸಿದ ಹಲವು ಯೋಜನೆಗಳ ವಿವರ:
ಹಿಂದುಳಿದ ವರ್ಗಗಳ ಕಲ್ಯಾಣ
* ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮಸ್ಥಳವಾದ ಸಂಗೊಳ್ಳಿ ಹಾಗೂ ಹುತಾತ್ಮರಾದ ನಂದಗಡದಲ್ಲಿ 267 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ
* ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರ ವೆಚ್ಚಕ್ಕಾಗಿ 1500 ರೂ. ಮತ್ತು 1600 ರೂ.ಗಳಿಗೆ ಹೆಚ್ಚಳ
* ಖಾಸಗಿ ಅನುದಾನಿತ ಅನಾಥಾಲಯಗಳ ವಿದ್ಯಾರ್ಥಿಗಳ ಊಟದ ವೆಚ್ಚದ ದರ ತಲಾ 700 ರೂ.ಗಳಿಂದ 800 ರೂ.ಗಳಿಗೆ ಹೆಚ್ಚಳ
* ವಿದ್ಯಾಸಿರಿ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹೆಚ್ಚಳ
* ಶಿಕ್ಷಣ-ಉದ್ಯೋಗದಲ್ಲಿ ಮೀಸಲಾತಿ ಕೆನೆಪದರ ಆದಾಯ ಮಿತಿ 6 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಹೆಚ್ಚಳ
* ಮುಂದಿನ 5 ವಷರ್ಗಳಲ್ಲಿ 750 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕಾಗಿ ವಿದೇಶಿ ವಿಶ್ವವಿದ್ಯಾನಿಲಯಗಳಿಗೆ ಕಳುಹಿಸುವ ಗುರಿ, 2018-19ನೆ ಸಾಲಿನಲ್ಲಿ 150 ವಿದ್ಯಾರ್ಥಿಗಳ ಆಯ್ಕೆ
* 2000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ವಿಶೇಷ ಕೋಚಿಂಗ್
* ಹಿಂ.ವರ್ಗಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ ನೀಟ್, ಜೀ, ಗೇಟ್ ಇತ್ಯಾದಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ತರಬೇತಿ
* ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂ.ವರ್ಗಗಳ ವಿದ್ಯಾರ್ಥಿಗಳ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ 10 ಸಾವಿರ ರೂ.ಗಳಿಗೆ ಹೆಚ್ಚಳ
* ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿಗಳಿಂದ ಕೈಗಾರಿಕಾ ಶೆಡ್‌ಗಳು ಹಾಗೂ ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ ಹಿಂ.ವರ್ಗಗಳ ಪ್ರವರ್ಗ-1, ಪ್ರವರ್ಗ 2ಎ ಮತ್ತು ಪ್ರವರ್ಗ-2ಬಿ ಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಕೆನೆಪದರ ಆದಾಯ ಮಿತಿ ಹಿಂದಕ್ಕೆ
* ಹಿಂ.ವರ್ಗಗಳ ಸಂಘ ಸಂಸ್ಥೆಗಳು ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ತಲಾ 5 ಲಕ್ಷ ರೂ.
* ಹಿಂ.ಸಮುದಾಯಗಳಾದ ಸವಿತಾ ಸಮಾಜ, ತಿಗಳ, ಮಡಿವಾಳ ಮತ್ತು ಕುಂಬಾರರ ಆರ್ಥಿಕಾಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ
* ಹಿಂ.ವರ್ಗಗಳ ನಿರುದ್ಯೋಗಿ ಪದವೀಧರರ ಸ್ವಯಂ ಉದ್ಯೋಗಕ್ಕಾಗಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳವರೆಗೆ ಸಾಲ
* ಅತಿ ಹಿಂದುಳಿದ ಬುಡಬುಡಕೆ, ಗೊಲ್ಲ, ಹೆಳವ, ಗೊಂದಳಿ, ಜೋಗಿ, ಶಿಕ್ಕಲಿಗರ್, ಪಿಚಗುಂಟಲ, ದೊಂಬಿದಾಸ ಇತ್ಯಾದಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ.
* 2018-19ನೆ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟು 3,172 ಕೋಟಿ ರೂ.
ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ಮತ್ತು ಸಹಾಯಧನಕ್ಕಾಗಿ 30 ಕೋಟಿ ರೂ.
* ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.
* ಜೈನ ಮತ್ತು ಸಿಖ್ ಸಮುದಾಯಗಳ ಅಭಿವೃದ್ಧಿಗಾಗಿ 80 ಕೋಟಿ ರೂ.
* ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್, ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣಕ್ಕೆ 10 ಕೋಟಿ ರೂ.
* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ
* ಹಿಂ.ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಅತ್ಯುತ್ತಮ ಫಲಿತಾಂಶಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ (ಸ್ಟಾರ್ಟ್ ಆಪ್) ಸಾಲ
* ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 15 ಕೋಟಿ ರೂ.
* ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗೆ 20 ಕೋಟಿ ರೂ.
* 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆ
* 5 ಪದವಿ ಪೂರ್ವ ಮಹಿಳಾ ವಸತಿ ಕಾಲೇಜು
* 2 ಮಾದರಿ ವಸತಿ ಶಾಲೆ ಪ್ರಾರಂಭ
* 25 ವಿದ್ಯಾರ್ಥಿನಿಲಯ, 10 ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯ
* 4 ಬಿಎಡ್ ಹಾಗೂ ಡಿ.ಎಡ್. ಆಂಗ್ಲ ಮಾಧ್ಯಮ ಬಾಲಕಿಯರ ವಸತಿ ಸಹಿತ ಕಾಲೇಜು ಮತ್ತು ಸಂಪನ್ಮೂಲ ಕೇಂದ್ರ ಆರಂಭ
* ಎಂಎಸ್‌ಡಿಪಿ ಯೋಜನೆಯಡಿಯಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿರುವ 25 ಸ್ಥಳಗಳಲ್ಲಿ ವಿದ್ಯಾರ್ಥಿನಿಲಯ, ಮಾದರಿ ಆದರ್ಶ ಶಾಲೆ-ವಸತಿ ಕಾಲೇಜು ಆರಂಭ
* ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸಿ, ಎಲ್ಲ ಮೆಟ್ರಿಕ್ ಪೂರ್ವ-ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪರಸ್ಪರ ಪ್ರವೇಶ
* 5 ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಮೇಲ್ದರ್ಜೆಗೇರಿಸಲಾಗುವುದು.
* 5 ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ
* 10 ಮೊರಾರ್ಜಿ ದೇಸಾಯಿ ವಸತಿ ಶಾಲೆ ದಾಖಲಾತಿ ಸಂಖ್ಯಾಬಲ 50 ರಿಂದ 60ಕ್ಕೆ ಹೆಚ್ಚಳ
* ದಾಖಲಾತಿ ಪಡೆಯಲು ಪೋಷಕರ ವರಮಾನ 2.50 ಲಕ್ಷ ರೂ.ಗಳಿಗೆ ಹೆಚ್ಚಳ
* ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ
* ಸರಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಲ್ಲ ವಸತಿ ಶಾಲೆಯ-ಕಾಲೇಜುಗಳ ಪ್ರತಿ ವಿದ್ಯಾರ್ಥಿಗೆ ಆಹಾರ ಭತ್ತೆ ಮಾಸಿಕ 100 ರೂ.ಗಳಿಗೆ ಹೆಚ್ಚಳ
* ಖಾಸಗಿ ಅನುದಾನಿತ ಅನಾಥಾಲಯ ವಿದ್ಯಾರ್ಥಿಗಳ ಭೋಜನಾ ವೆಚ್ಚದ ದರ 800 ರೂ.ಗಳಿಗೆ ಹೆಚ್ಚಳ
* 10ನೇ ತರಗತಿ ಮತ್ತು ದ್ವಿತೀಯ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಗೆ 2 ಸಾವಿರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
* ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ 1ನೇ ವರ್ಷದಲ್ಲಿ ಪ್ರವೇಶ ಹೊಂದಿರುವ ಎಲ್ಲ್ಲ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ಯೋಜನೆಯಡಿ 25 ಸಾವಿರ ರೂ.
* ಬಿಎಡ್ ಹಾಗೂ ಡಿ ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ವಿಶೇಷ ಪ್ರೋತ್ಸಾಹ ಧನ
* ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆ 25 ಸಾವಿರಕ್ಕೆ ಹೆಚ್ಚಳ
* ನದಾಫ್-ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.
* ದಿ ಬ್ಯಾರಿ ವೆಲ್‌ಫೇರ್ ಅಸೋಸಿಯೇಷನ್‌ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ. ಸಹಾಯ ಧನ
* ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.
* ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆ 5 ಸಾವಿರ ರೂ.ಗಳಿಗೆ ಹೆಚ್ಚಳ
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿ ನಿಲಯಗಳಲ್ಲಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ, ನೇಟ್ ಪಠ್ಯಪುಸ್ತಕಗಳ ಪೂರೈಕೆ
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ ಜೀ, ನೀಟ್, ಗೇಟ್ ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ
* ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.
* ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಕ್ಕೆ 800 ಕೋಟಿ ರೂ.
* 2018-19ನೆ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಒಟ್ಟು 2,281 ಕೋಟಿ ರೂ.ವೆಚ್ಚ ವಸತಿ
* ಮುಂದಿನ 5 ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 20 ಲಕ್ಷ ಮನೆಗಳ ನಿರ್ಮಾಣ
* ಮುಖ್ಯಮಂತ್ರಿಗಳ ನಗರ ವಸತಿ ಯೋಜನೆ ರಾಜ್ಯಾದ್ಯಂತ ಜಾರಿ
* ನಗರ ಪ್ರದೇಶದಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕಾಗಿ ಬಿಬಿಎಂಪಿ ಯಲ್ಲಿ 2 ಸಾವಿರ ಎಕರೆ, ಮಹಾನಗರ ಪಾಲಿಕೆಗಳಲ್ಲಿ 500 ಎಕರೆ, ನಗರಸಭೆ- ಪುರಸಭೆ ಪ್ರದೇಶಗಳಲ್ಲಿ 250 ಎಕರೆ ಹಾಗೂ ಇತರೆ ಪಟ್ಟಣ ಪ್ರದೇಶಗಳಲ್ಲಿ 100 ಎಕರೆ ಸರಕಾರಿ ಜಮೀನನ್ನು ವಸತಿಗಾಗಿ ಮೀಸಲು
* ಕೊಳೆಗೇರಿ ಪ್ರದೇಶಗಳಲ್ಲಿ ಟಿಡಿಆರ್ ಮತ್ತು ಹೆಚ್ಚುವರಿ ಎಫ್‌ಎಆರ್ ನೀಡುವ ಮೂಲಕ ಅವುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.
* 2018-19ನೇ ಸಾಲಿನಲ್ಲಿ ವಸತಿ ಇಲಾಖೆಗೆ ಒಟ್ಟಾರೆಯಾಗಿ 3,942 ಕೋಟಿ ರೂ.
ಕಾರ್ಮಿಕ
* ಅಸಂಘಟಿತ ಕಾರ್ಮಿಕರನ್ನು ಕೇಂದ್ರವಾಗಿಟ್ಟುಕೊಂಡು ಮಾರ್ಚ್ 1 ರಂದು ಕಾರ್ಮಿಕರ ಸಮ್ಮಾನ ದಿನ ಆಚರಣೆ
* ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ‘ಕಾರ್ಮಿಕರ ಸಮ್ಮಾನ ಪ್ರಶಸ್ತಿ’ ಪ್ರದಾನ
* ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಸ್ಮಾರ್ಟ್ ಕಾರ್ಡನ್ನು ವಿತರಿಸುವ ಜೊತೆಗೆ ವಂತಿಗೆ ಆಧಾರಿತ ಪಿಂಚಣಿ ಯೋಜನೆಗೆ 25 ಕೋಟಿ ರೂ.ಗಳ ವೆಚ್ಚ
* 2018-19ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆಗೆ ಒಟ್ಟಾರೆಯಾಗಿ 531 ಕೋಟಿ ರೂ.
ಕೌಶಲ್ಯಾಭಿವದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ
* 2.50 ಲಕ್ಷ ಜನರಿಗೆ ವೃತ್ತಿ ತರಬೇತಿ ಸಂಸ್ಥೆಗಳ ಮೂಲಕ ತರಬೇತಿ
* 2018-19ರಲ್ಲಿ ಡಿಜಿಟಲ್ ಲರ್ನಿಂಗ್‌ಗೆ ಒತ್ತು
* 120 ಸರಕಾರಿ ಐಟಿಐಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ಹೊಂದಿರುವ ಮಲ್ಟಿಮೀಡಿಯಾ ಕಂಪ್ಯೂಟರ್ ಲ್ಯಾಬ್
* ವಿದೇಶಗಳಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಹೊಂದಲು ಹಾಗೂ ಕರ್ನಾಟಕವನ್ನು ವಿದೇಶಿ ಉದ್ಯೋಗಕ್ಕೆ ಆದ್ಯತಾ ರಾಜ್ಯವನ್ನಾಗಿ
ರೂಪಿಸಲು ರಾಜ್ಯದ ಯುವ ಜನತೆಗೆ ಅಗತ್ಯ ತರಬೇತಿ ಮತ್ತು ಪ್ರೋತ್ಸಾಹ
* 2018-19ನೇ ಸಾಲಿನಲ್ಲಿ ಕೌಶಲ್ಯಾಭಿವದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗೆ ಒಟ್ಟಾರೆಯಾಗಿ 794 ಕೋಟಿ ರೂ.
ಕನ್ನಡ ಮತ್ತು ಸಂಸ್ಕೃತಿ
* ರಾಷ್ಟ್ರಕವಿ ಕುವೆಂಪು ಅವರ ಮೈಸೂರಿನ ನಿವಾಸ ಉದಯರವಿಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿ
* ಕನ್ನಡ ನಾಡಿನ ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸುವ ಜನಪದ ಸಾಂಸ್ಕೃತಿಕ ಭಾರತ ಕಾರ್ಯಕ್ರಮ ಅನುಷ್ಠಾನ
* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಅಕಾಡೆಮಿಗಳು, ಪ್ರಾಧಿಕಾರಗಳು ಪ್ರಕಟಿಸಿರುವ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಕೆಎಸ್ಸಾರ್ಟಿಸಿ ಸಹಯೋಗದಲ್ಲಿ ಪುಸ್ತಕ ಜಾಥಾ ಕಾರ್ಯಕ್ರಮಕ್ಕೆ 1.5 ಕೋಟಿ ರೂ.
* ವಿವಿಧ ಅಕಾಡೆಮಿಗಳು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಅಕಾಡೆಮಿಗಳಿಗೆ ನೀಡುತ್ತಿರುವ ಅನುದಾನ ಹೆಚ್ಚಳ
* ಗಡಿ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ 50 ಕೋಟಿ ರೂ.
* ಸಮಗ್ರ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನವಾಗಿ ಅಧ್ಯಯನ ಪೀಠ ಸ್ಥಾಪನೆ
* ಕನ್ನಡ ತಂತ್ರಾಂಶ ಅಭಿವೃದ್ಧಿ ಹಾಗೂ ಕನ್ನಡ ತಾಂತ್ರಿಕ ವಿಷಯಗಳಲ್ಲಿ ಸಂಶೋಧನೆ ನಡೆಸುವ ತಾಂತ್ರಿಕ ವಿದ್ಯಾರ್ಥಿಗಳಿಗೆ ಫೆಲೋಷಿಪ್
* ಕನ್ನಡದ ನವೋದಯ ಕಾವ್ಯದ ಪ್ರವರ್ತಕ ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ‘ಕಟ್ಟುವೆವು ನಾವು ಹೊಸ ನಾಡೊಂದನು’
ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮ
* ದಾವಣಗೆರೆ ಜಿಲ್ಲೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರ ಪ್ರಾರಂಭ
* 2018-19ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಒಟ್ಟು 425 ಕೋಟಿ ರೂ.ವೆಚ್ಚ
ಯುವ ಸಬಲೀಕರಣ ಮತ್ತು ಕ್ರೀಡಾ
* ರಾಜ್ಯದ 5 ಜಿಲ್ಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಪ್ರತ್ಯೇಕ ಮಹಿಳಾ ವಸತಿ ನಿಲಯಗಳನ್ನು ಪ್ರಾರಂಭ
* ನಾಡಹಬ್ಬ ದಸರಾ ಕ್ರೀಡಾಕೂಟ ಮೈಸೂರಿನಲ್ಲಿ ಆಯೋಜಿಸಲು 7 ಕೋಟಿ ರೂ.
* ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕೆ ಮಾಹಿತಿ ನೀಡಲು ‘ಯುವ ಸಹಾಯವಾಣಿ ಆರಂಭ’
* ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ
* ಬೆಂಗಳೂರಿನ ದೇವನಹಳ್ಳಿ, ಎಚ್‌ಎಸ್‌ಆರ್ ಬಡಾವಣೆ, ತಾವರೆಕೆರೆ ಹಾಗೂ ವರ್ತೂರು ಪ್ರದೇಶಗಳಲ್ಲಿ ಆಧುನಿಕ ಕ್ರೀಡಾ ಸೌಲಭ್ಯಕ್ಕೆ 20 ಕೋಟಿ ರೂ.
* ಜಾಗತಿಕ ಮಟ್ಟದ ವಾರ್ಷಿಕ ಕರ್ನಾಟಕ ಕುಸ್ತಿ ಹಬ್ಬ ಆಯೋಜನೆ
* ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೊರಾಂಗಣ ಜಿಮ್ ಸೌಕರ್ಯ
* 2018-19ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಒಟ್ಟಾರೆಯಾಗಿ 237 ಕೋಟಿ ರೂ. ಒದಗಿಸಲಾಗಿದೆ







