Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಮತ್ತು ಮಕ್ಕಳ ಕಲ್ಯಾಣ: 100...

ಮಹಿಳಾ ಮತ್ತು ಮಕ್ಕಳ ಕಲ್ಯಾಣ: 100 ಸಂಚಾರಿ ಅಂಗನವಾಡಿಗೆ 10 ಕೋಟಿ ಅನುದಾನ

ರಾಜ್ಯ ಬಜೆಟ್-2018

ವಾರ್ತಾಭಾರತಿವಾರ್ತಾಭಾರತಿ16 Feb 2018 6:49 PM IST
share
ಮಹಿಳಾ ಮತ್ತು ಮಕ್ಕಳ ಕಲ್ಯಾಣ: 100 ಸಂಚಾರಿ ಅಂಗನವಾಡಿಗೆ 10 ಕೋಟಿ ಅನುದಾನ

ಬೆಂಗಳೂರು, ಫೆ. 16: ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಪ್ರದೇಶಗಳಲ್ಲಿ ಅವರ ಮಕ್ಕಳ ಪಾಲನೆ ಮಾಡಲು 100 ಸಂಚಾರಿ ಅಂಗನವಾಡಿ ಕೇಂದ್ರ ಅಥವಾ ಶಿಶುಪಾಲನಾ ಕೇಂದ್ರಗಳ ಸ್ಥಾಪನೆಗೆ 10 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

* ನಗರ ಪ್ರದೇಶಗಳಲ್ಲಿ ಹೊಸದಾಗಿ 250 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು 17.50 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

* ಮಕ್ಕಳ ಸುರಕ್ಷತೆಯು ಸರಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ಪ್ರಾರಂಭಿಸಲಾಗುವುದು.

* ಇಲಾಖೆಯ ಮೇಲ್ವಿಚಾರಕಿಯರ ಕಾರ್ಯದಕ್ಷತೆಯನ್ನು ಹೆಚ್ಚಿಸಲು 2503 ಮೇಲ್ವಿಚಾರಕಿಯರಿಗೆ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಸ್ಕೂಟರ್ ಖರೀದಿಸಲು 50 ಸಾವಿರ ರೂ.ಗಳ ಬಡ್ಡಿ ರಹಿತ ಸಾಲವನ್ನು ನೀಡಲಾಗುವುದು. ಇದರ ಜೊತೆ ಇಂಧನ ವೆಚ್ಚಕ್ಕಾಗಿ ಮಾಸಿಕ 1ಸಾವಿರ ರೂ.ನೀಡಲಾಗುವುದು.

* ರಾಜ್ಯದಲ್ಲಿನ ಅಂಗನವಾಡಿ ಮಕ್ಕಳ ಪೌಷ್ಟಿಕತಾ ಮಟ್ಟವನ್ನು ಮಾಪನ ಮಾಡಲು ನ್ಯೂಟ್ರಿಷನ್ ಸರ್ವೆಯನ್ನು ಕೈಗೊಳ್ಳಲಾಗುವುದು.

* ಪರಿಶಿಷ್ಟ ಜಾತಿ ಅಥವಾ ಪಂಗಡಗಳ ಉಪಯೋಜನೆಯಡಿ 1ಸಾವಿರ ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ರಾಜ್ಯದಲ್ಲಿ ಎಚ್‌ಐವಿ ಅಥವಾ ಏಡ್ಸ್‌ನಿಂದ ಬಾಧಿತರಾದ, ಕುಟುಂಬ ಹಾಗೂ ಸಮಾಜದಿಂದ ನಿರ್ಲಕ್ಷಿತರಾದ ಮಹಿಳೆಯರ ಪೋಷಣೆ ಮತ್ತು ರಕ್ಷಣೆಗಾಗಿ ವಿಭಾಗೀಯ ಮಟ್ಟದಲ್ಲಿ ಆಶ್ರಯ ಕೇಂದ್ರ ಸ್ಥಾಪಿಸಲು ಸ್ವಯಂಸೇವಾ ಸಂಸ್ಥೆಗಳಿಗೆ ಒಟ್ಟು 1 ಕೋಟಿ ರೂ. ಅನುದಾನ ಒದಗಿಸಲಾಗುವುದು.

* ಬಾಲಮಂದಿರಗಳು ಮತ್ತು ವೀಕ್ಷಣಾಲಯಗಳಲ್ಲಿನ ಮಕ್ಕಳಿಗೆ ಇಂಗ್ಲಿಷ್ ಭಾಷೆ, ಕಾನೂನು ವಿಷಯ, ಕ್ರೀಡೆ, ಲಲಿತ ಕಲೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ಸಿದ್ಧತೆಗಾಗಿ ಹಾಗೂ ಅವರ ಜೀವನಕ್ಕೆ ಪೂರಕವಾದ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು 1 ಕೋಟಿ ರೂ. ಅನುದಾನ ಒದಗಿಸಲಾಗುವುದು.

* ಆಯ್ದ 10 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ನ್ಯಾಯಾಲಯವನ್ನು ಮಕ್ಕಳ ಸ್ನೇಹಿ ನ್ಯಾಯಾಲಯಗಳನ್ನಾಗಿ ಪರಿವರ್ತಿಸಲು 3 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

* ಉದ್ಯೋಗಿನಿ ಯೋಜನೆಯಡಿಯಲ್ಲಿ ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು ಒಂದು ಲಕ್ಷ ರೂ. ಗಳಿಂದ 3 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ ಶೇ.30ರಷ್ಟಕ್ಕೆ, ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು 1.5 ಲಕ್ಷ ರೂ.ಗಳಿಗೆ ಹಾಗೂ ವಯೋಮಿತಿಯನ್ನು ಎಲ್ಲಾ ವರ್ಗದವರಿಗೂ 45 ವರ್ಷದಿಂದ 55 ವರ್ಷಕ್ಕೆ ಹೆಚ್ಚಿಸಲಾಗಿದೆ.

* 2018-19ನೇ ಸಾಲಿನಿಂದ, ಶೇ.75ಕ್ಕೂ ಹೆಚ್ಚಿನ ಅಂಗವೈಕಲ್ಯತೆ ಹೊಂದಿರುವ ವಿಕಲಚೇತನರಿಗೆ ನೀಡುತ್ತಿರುವ ಮಾಸಾಶನವನ್ನು 200 ರೂ.ಗಳಷ್ಟು ಹಾಗೂ ಶೇ.75ಕ್ಕೂ ಕಡಿಮೆ ಅಂಗವೈಕಲ್ಯತೆ ಹೊಂದಿರುವ ವಿಕಲಚೇತನರಿಗೆ ನೀಡುತ್ತಿರುವ ಮಾಸಾಶನವನ್ನು 100 ರೂ.ಗಳಷ್ಟು ಹೆಚ್ಚಿಸಲಾಗಿದೆ.

* ಬುದ್ಧಿಮಾಂದ್ಯ ವಯಸ್ಕರಿಗೆ ಸೂಕ್ತ ವೃತ್ತಿ ತರಬೇತಿ ನೀಡಿ, ಅವರನ್ನು ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿ ವಿಶ್ವಸಂಸ್ಥೆಯ 2030ರ ಅಭಿವೃದ್ಧಿ ಕಾರ್ಯಸೂಚಿಯಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿ ಸಾಧನೆಯ ಉದ್ದೇಶದಿಂದ ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ವೃತ್ತಿ ತರಬೇತಿ ಕೇಂದ್ರ ಸ್ಥಾಪಿಸಲು 1.80 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಅಂಗವಿಕಲತೆಯ ಪ್ರಮಾಣಕ್ಕನುಸಾರ ಮಹಿಳೆಯರಿಗೆ ಸೂಕ್ತ ಆದ್ಯತೆ ನೀಡುವುದರೊಂದಿಗೆ ಎಲ್ಲಾ ಸಂಬಂಧಪಟ್ಟ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ, ಕೃಷಿ ಭೂಮಿ ಹಂಚಿಕೆ ಮತ್ತು ವಸತಿಯಲ್ಲಿ ಶೇ. 5ರಷ್ಟು ಮೀಸಲಾತಿ.

* ಬಡತನ ನಿರ್ಮೂಲನೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಶೇ. 5ರಷ್ಟು ಅಂಗವಿಕಲರಿಗೆ ಮೀಸಲಾತಿ.

* ವಸತಿ, ಆಶ್ರಯ, ವೃತ್ತಿ, ವ್ಯಾಪಾರ, ಉದ್ಯಮ, ಮನರಂಜನಾ ಕೇಂದ್ರಗಳು ಮತ್ತು ಉತ್ಪಾದನಾ ಕೇಂದ್ರಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಉದ್ದೇಶಕ್ಕಾಗಿ ಭೂಮಿಯನ್ನು ಬಳಸಲಾಗಿದ್ದರೆ, ರಿಯಾಯಿತಿ ದರದಲ್ಲಿ ಭೂಮಿ ಹಂಚಿಕೆಯಲ್ಲಿ ಶೇ. 5ರಷ್ಟು ಮೀಸಲಾತಿ.

* ಮಹಿಳೆಯರ ಬಗ್ಗೆ ಸಕಾರಾತ್ಮಕ ಮನೋಭಾವವನ್ನು ಮೂಡಿಸಲು ಮತ್ತು ಸುರಕ್ಷಿತ ವಾತಾವರಣವನ್ನು ಕಲ್ಪಿಸಲು ಸರಕಾರಿ ಸಿಬ್ಬಂದಿಗಳಿಗೆ, ಸಮುದಾಯ ಪೊಲೀಸ್ ಸ್ವಯಂ ಸೇವಕರು, ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಬಾಲಕರಿಗೆ ಲಿಂಗತ್ವದ ಬಗ್ಗೆ ಅರಿವು ಮೂಡಿಸಲು 2 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಮಹಿಳೆಯರಿಗಾಗಿ ಸಮಗ್ರ ಮಾಹಿತಿ ಸಂಪನ್ಮೂಲ ಪೋರ್ಟಲ್ ಪ್ರಾರಂಭಿಸಿ, ಅವಶ್ಯಕ ಮಾಹಿತಿಗಳಾದ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು, ಸೌಲಭ್ಯಗಳು, ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಲು 1 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಬೆಂಗಳೂರು ನಗರಕ್ಕೆ ಉದ್ಯೋಗ ಸಂದರ್ಶನ, ಪ್ರವೇಶ ಪರೀಕ್ಷೆ ಇತ್ಯಾದಿಗಳಿಗೆ ಹಾಜರಾಗಲು ಬರುವ ಯುವತಿಯರಿಗೆ ಸ್ವಯಂ ಸೇವಾ ಸಂಸ್ಥೆಗಳ ಹಾಗೂ ಖಾಸಗಿ ಸಹಭಾಗಿತ್ವ ಸಹಾಯದೊಂದಿಗೆ ಟ್ರಾನ್ಸಿಟ್ ಹಾಸ್ಟೆಲ್‌ಗಳನ್ನು ಪ್ರಾರಂಭಿಸಲಾಗುವುದು.

* ಮಹಿಳಾ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಸಾರ್ವಜನಿಕ ಸೇವೆಗಳ ಸಂಗ್ರಹಣೆಯಲ್ಲಿ (ಕ್ಯಾಟರಿಂಗ್, ಹೌಸ್ ಕೀಪಿಂಗ್, ನಗರ ಪ್ರದೇಶ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಇತ್ಯಾದಿ) ಮಹಿಳಾ ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಪ್ರಾತಿನಿಧ್ಯದ ಉದ್ದಿಮೆದಾರರಿಂದ ಪಡೆಯಲು ಆದ್ಯತೆ ನೀಡಲಾಗುವುದು.

* 2018-19ನೆ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 5,371 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X