ಉಪ್ಪಿನಂಗಡಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಜಾತ್ರೆಗೆ ಹೋಗುವ ಎಂದು ಕರೆದು ವಂಚನೆ

ಉಪ್ಪಿನಂಗಡಿ, ಫೆ. 16: ದಲಿತ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಟ್ಟಂಪಾಡಿಯ ಯುವತಿಯೋರ್ವಳ ಮೇಲೆ ಅತ್ಯಾಚಾರ ನಡೆದಿದ್ದು, ಫೋನಿನಲ್ಲಿ ಪರಿಚಿತನಾದ ಧನಂಜಯ ಹಾಗೂ ಇನ್ನೋರ್ವ ಆಕೆಯನ್ನು ಗುರುವಾರ ರಾತ್ರಿ ಜಾತ್ರೆಗೆ ಹೋಗುವ ಎಂದು ನೆಲ್ಯಾಡಿ ಕಡೆಗೆ ಕರೆದುಕೊಂಡು ಹೋಗಿ ಅಲ್ಲಿಯ ಖಾಲಿ ಮನೆಯೊಂದರಲ್ಲಿ ಅತ್ಯಾಚಾರವೆಸಗಿ ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಯುವತಿ ಶುಕ್ರವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
Next Story





