ಕಲಾಭಿರುಚಿಗಳಿಂದ ಸಾಮಾಜಿಕ ಸ್ವಾಸ್ಥ: ಡಾ.ರೋಶನ್ ಕುಮಾರ್ ಶೆಟ್ಟಿ

ಉಡುಪಿ, ಫೆ.16: ಪ್ರತಿಯೊಬ್ಬರಲ್ಲೂ ಒಂದೊಂದು ರೀತಿಯ ಅಸಕ್ತಿ ಇರು ತ್ತದೆ. ಅದರಲ್ಲಿ ಕಲಾಸಕ್ತಿ ಶ್ರೇಷ್ಟ ಎನಿಸುತ್ತದೆ. ಒಳಿತನ್ನು ಸಾಧಿಸುವ ಹಂಬಲ ಮತ್ತು ಸಾಮುದಾಯಿಕ ಪ್ರಜ್ಞೆಯಿರುವುದರಿಂದ ಕಲಾಭಿರುಚಿಗಳು ಸಾಮಾ ಜಿಕ ಸ್ವಾಸ್ಥಕ್ಕೆ ಕಾರಣವಾಗುತ್ತದೆ ಎಂದು ಉಡುಪಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಸುಮನಸಾ ಕೊಡವೂರು ವತಿಯಿಂದ ಅಜ್ಜರಕಾಡು ಭುಜಂಗ ಪಾರ್ಕಿನ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ರಂಗಹಬ್ಬದ ಐದನೇ ದಿನವಾದ ಗುರುವಾರ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯಅತಿಥಿಗಳಾಗಿ ಕರ್ಣಾಟಕ ಬ್ಯಾಂಕಿನ ಪ್ರಾದೇಶಿಕ ಕಛೇರಿಯ ಸಹಾ ಯಕ ಮಹಾಪ್ರಬಂಧಕಿ ವಿದ್ಯಾಲಕ್ಷ್ಮೀ ಆರ್., ಮಂಗಳೂರು ಅರೆಹೊಳೆ ಪ್ರತಿ ಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಉಡುಪಿ ಯಕ್ಷಗಾನ ಕಲಾ ರಂಗದ ಅಧ್ಯಕ್ಷ ಕೆ.ಗಣೇಶ್ ರಾವ್, ಉದ್ಯಮಿ ಹರಿಯಪ್ಪ ಕೋಟ್ಯಾನ್, ಸುಭಾಸ್‌ನಗರ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಸದಾನಂದ ಪ್ರಭು ಪೆರ್ಣಂಕಿಲ, ತೊಟ್ಟಂ ಗಜಾನನ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಶಶಿಧರ್ ಅಮೀನ್, ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ, ಸುಮನಸಾದ ಉಪಾಧ್ಯಕ್ಷ ಗಣೇಶ್ ರಾವ್ ಎಲ್ಲೂರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಂತರಾಮ್ ಆಚಾರ್ಯರನ್ನು ಸನ್ಮಾನಿಸಿ ಗೌರವಿಸ ಲಾಯಿತು. ಪ್ರವೀಣ್ ಜಿ.ಕೊಡವೂರು ಸ್ವಾಗತಿಸಿದರು. ರಾಜ್‌ಗೋಪಾಲ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಧೇಶ್ ಶೆಣೈ ಸನ್ಮಾನಿತರ ಪರಿಚಯ ಮಾಡಿದರು. ವಿದ್ಯಾಯದಾಯಿನಿ ವಂದಿಸಿದರು. ಅಕ್ಷತ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.







