Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಲವು ಪ್ರಥಮಗಳ ಗರಿ ಕರ್ನಾಟಕದ ಯಶಸ್ಸಿನ...

ಹಲವು ಪ್ರಥಮಗಳ ಗರಿ ಕರ್ನಾಟಕದ ಯಶಸ್ಸಿನ ಕಿರೀಟವನ್ನು ಅಲಂಕರಿಸಿದೆ: ಸಿದ್ದರಾಮಯ್ಯ

ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Feb 2018 9:43 PM IST
share
ಹಲವು ಪ್ರಥಮಗಳ ಗರಿ ಕರ್ನಾಟಕದ ಯಶಸ್ಸಿನ ಕಿರೀಟವನ್ನು ಅಲಂಕರಿಸಿದೆ: ಸಿದ್ದರಾಮಯ್ಯ

ಬೆಂಗಳೂರು, ಫೆ. 16: ‘ಸರಕಾರವೆಂದರೆ, ಕನ್ನಡಿಗರ ಕಣ್ಣುಗಳಲ್ಲಿನ ಕನಸುಗಳನ್ನು ನನಸು ಮಾಡುವ ಭರವಸೆ. ನಾವು ಕೇವಲ ಕನಸು ಬಿತ್ತುವವರಲ್ಲ, ಬಿತ್ತಿದ ಕನಸನ್ನು ಬೆಳೆಸಿ ನನಸು ಮಾಡುವವರು. ಈ ಪ್ರಾಮಾಣಿಕ ಪ್ರಯತ್ನದ ಫಲವಾಗಿಯೇ ಕರ್ನಾಟಕ ದೇಶಕ್ಕೆ ಮಾದರಿ ರಾಜ್ಯವಾಗಿ ರೂಪುಗೊಳ್ಳುತ್ತಿದೆ. ಹಲವು ಪ್ರಥಮಗಳ ಗರಿ ಕರ್ನಾಟಕದ ಯಶಸ್ಸಿನ ಕಿರೀಟವನ್ನು ಅಲಂಕರಿಸಿದೆ’ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ‘ಕಾವ್ಯದ ವಾಗ್ಝರಿ’ಯನ್ನೇ ಹರಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 11:32ರ ಸುಮಾರಿಗೆ ತಮ್ಮ ಸಂಪುಟ ಸಹೊದ್ಯೋಗಿಗಳೊಂದಿಗೆ ಅತ್ಯಂತ ಲವಲವಿಕೆಯಿಂದಲೇ ವಿಧಾನಸಭೆ ಸಭಾಂಗಣ ಪ್ರವೇಶಿಸಿದ ಸಿದ್ದರಾಮಯ್ಯ, ‘ಆಯವ್ಯಯ ಎಂದರೆ ನನ್ನ ಪಾಲಿಗೆ ಅಂಕಿ-ಅಂಶಗಳ ಕಸರತ್ತು ಅಲ್ಲ. ನಿರ್ಜೀವ ಲೆಕ್ಕಗಳ ಗಣಿತವೂ ಅಲ್ಲ. ಸರಳವಾಗಿ ಹೇಳುವುದಾದರೆ ಇದು ಈ ರಾಜ್ಯದ ಪ್ರತಿಯೊಬ್ಬ ಪ್ರಜೆಯ ನಿತ್ಯದ ಬದುಕಿನ ಲೆಕ್ಕ. ಆತನ ಮನೆಯ ಲೆಕ್ಕ ಎಂದು ಉಲ್ಲೇಖಿಸಿದರು.

‘ಒಲ್ಲನೆಂಬುದು ವೈರಾಗ್ಯ, ಒಲಿವೆನೆಂಬುದು ಕಾಯಗುಣ, ಆವ ಪದಾರ್ಥವಾದಡೇನು? ತನ್ನಿದ್ದೆಡೆಗೆ ಬಂದುವ, ಲಿಂಗಾರ್ಪಿತವ ಮಾಡಿ ಭೋಗಿಸುವುದೇ ಆಚಾರ, ಕೂಡಲ ಸಂಗಮ ದೇವರನೊಲಿಸ ಬಂದ, ಪ್ರಸಾದ ಕಾಯ ಕೆಡಿಸಲಾಗದು’ ಎನ್ನುವ ಬಸವಣ್ಣನ ವಚನವನ್ನು ಉಲ್ಲೇಖದೊಂದಿಗೆ ಬಜೆಟ್ ಭಾಷಣ ಆರಂಭಿಸಿದರು.

ಬಸವಣ್ಣ ಆರ್ಥಿಕ ಪರಿಣತರೂ ಹೌದು, ಬಿಜ್ಜಳನ ಆಸ್ಥಾನದಲ್ಲಿ ಅರ್ಥ ಸಚಿವರಾಗಿದ್ದ ಬಸವಣ್ಣ ನನ್ನ ಪಾಲಿನ ಮಾರ್ಗದರ್ಶಕ. ಅವರ ಧರ್ಮ, ಪ್ರಸಾದ ಕೆಡಿಸದ ಧರ್ಮವನ್ನೇ ನಾನು ನಂಬಿಕೊಂಡು ನಡೆದಿದ್ದೇನೆ. ಬೊಕ್ಕಸದಲ್ಲಿನ ತೆರಿಗೆ ಹಣವನ್ನು ನಿರ್ವಹಿಸುವ ಟ್ರಸ್ಟಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ’ ಎಂದು ಅವರು ಹೇಳಿದರು.

‘ಮನುಷ್ಯರನ್ನು ಬದಲಾಯಿಸುವ ಹೋರಾಟದ ಮುಂಚೂಣಿಯಲ್ಲಿ ಹೆಣ್ಣು ಮಕ್ಕಳಿದ್ದರೆ ಮಾತ್ರ, ನಮಗೆ ಜಯ ಸಿಗಲು ಸಾಧ್ಯ. ಈ ಪಾತ್ರವನ್ನು ಅವಳಿಗೆ ನೀಡಬೇಕಾದುದು ಮಹಾ ಕರ್ತವ್ಯ’ ಎಂಬ ಗಾಂಧೀಜಿಯವರ ಮಾತುಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಜೆಟ್ ಮಂಡಿಸಿದರು.

‘ಪ್ರೀತಿ ಕರುಣೆ ಸ್ನೇಹ ಮರುಕ, ಇವೇ ನಮ್ಮ ದೇವರು, ಇಲ್ಲಿ ಇಲ್ಲ ಜಾತಿಗೀತಿ, ಇಲ್ಲಿ ಇರುವುದೊಂದೇ ಪ್ರೀತಿ’ ಎನ್ನುವ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪನವರ ಕಾವ್ಯವನ್ನು ವಾಚಿಸಿ, ಜಾತಿ ಮೀರಿ ಪ್ರೀತಿ ಸಾರುವ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಅಲ್ಪಸಂಖ್ಯಾತರ ಇಲಾಖೆ ಆಯವ್ಯಯ ಮಂಡಿಸಿದರು.

‘ನಾವೆಲ್ಲರು ಒಂದೇ ಜಾತಿ, ಒಂದೇ ಮತ, ಒಂದೇ ಕುಲ; ನಾವು ಮನುಜರು’ ಎಂಬ ಗೋಪಾಲಕೃಷ್ಣ ಅಡಿಗ ಕಾವ್ಯದೊಂದಿಗೆ ಸಮಾಜ ಕಲ್ಯಾಣ ಇಲಾಖೆ ಆಯವ್ಯಯ ಮಂಡನೆ ಮಾಡಿದ ಸಿದ್ದರಾಮಯ್ಯ, ‘ಇದೇ ನನ್ನ ತಾಯಿ ನಾಡು, ಇದೇ ನನ್ನ ತೊಟ್ಟಿಲು, ಅನ್ನ ನೀರನಿತ್ತು ಸಲಹಿದಂತ, ತಟ್ಟೆ ಬಟ್ಟಲು ಆದಿಪಂಪ ಆಸೆಪಟ್ಟ, ದುಂಬಿಯಾಗಿ ಹುಟ್ಟಲು, ನಂದನಕ್ಕೆ ಇಲ್ಲಿಂದಲೇ ಇರುವುದೊಂದೇ ಮೆಟ್ಟಿಲು’ ಎನ್ನುವ ಸು.ರಂ.ಎಕ್ಕುಂಡಿಯವರ ಕವನವನ್ನು ಪಸ್ತಾಪಿಸಿ ಸಂಸ್ಕೃತಿ ಇಲಾಖೆ ಬಜೆಟ್ ಮಂಡನೆ ಮಾಡಿದರು.

‘ಹಳ್ಳಿಗಳು ಭಾರತದ ಆತ್ಮ’ ಎಂಬ ಮಹಾತ್ಮ ಗಾಂಧೀಜಿಯವರ ಮಾತುಗಳನ್ನು ಉಲ್ಲೇಖಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯವ್ಯಯ ಮಂಡಿಸಿದರು. ತಮ್ಮ ಬಜೆಟ್ ಭಾಷಣದಲ್ಲಿ ಶರಣರ ವಚನಗಳ ಉಲ್ಲೇಖ, ಕಾವ್ಯದ ವಾಗ್ಝರಿ ಮೂಲಕ ಆಯವ್ಯಯಕ್ಕೆ ಕಾವ್ಯದ ಸ್ಪರ್ಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X