Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ದಲಿತ ಯುವತಿಯ ಅತ್ಯಾಚಾರ:...

ಕಾರ್ಕಳ ದಲಿತ ಯುವತಿಯ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ

ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ16 Feb 2018 9:59 PM IST
share
ಕಾರ್ಕಳ ದಲಿತ ಯುವತಿಯ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ

ಉಡುಪಿ, ಫೆ.16: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರುವರೆ ವರ್ಷಗಳ ಹಿಂದೆ ನಡೆದ ಪರಿಶಿಷ್ಟ ಜಾತಿಯ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಇಂದು ಆದೇಶ ನೀಡಿದೆ.

ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ನಿವಾಸಿ ಪ್ರದೀಪ್ ಪೂಜಾರಿ (32) ಶಿಕ್ಷೆಗೆ ಗುರಿಯಾದ ಅಪರಾಧಿ. ಮುಂಬೈಯ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಆತ 2014ರ ಸೆ.10ರಂದು ಸಂಜೆ 5:55ರ ಸುಮಾರಿಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷ ವಯಸ್ಸಿನ ದಲಿತ ಯುವತಿಯನ್ನು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಗದ್ದೆ ಬದಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಕೊಲೆ ಬೆದರಿಕೆಯೊಡ್ಡಿದ್ದನೆಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರದೀಪ್ ಪೂಜಾರಿಯನ್ನು ಮರುದಿನ ಸೆ.11ರಂದು ಬಂಧಿಸಿದ ಕಾರ್ಕಳ ಪೊಲೀಸರು, ಆತನ ವಿರುದ್ಧ ಕಲಂ 376, 323, 506 ಐಪಿಸಿ ಕಲಂ 3(1),(12), ಎಸ್‌ಸಿ/ಎಸ್‌ಟಿ(ಪಿಒಎ) ಕಾಯಿದೆ ಪ್ರಕಾರ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಆಗಿನ ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಅಣ್ಣಾಮಲೈ 2014ರ ಡಿ.5ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ಒಟ್ಟು 29 ಸಾಕ್ಷಿಗಳ ಪೈಕಿ 20 ಸಾಕ್ಷಿಗಳ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ನ್ಯಾಯಾಧೀಶ ಟಿ. ವೆಂಕಟೇಶ ನಾಯ್ಕಾ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು, ಅಪರಾಧಿಗೆ ಜೀವಿತ ಅವಧಿಯವರೆಗೆ ಜೈಲಿನಲ್ಲಿರುವ ಶಿಕ್ಷೆ ಮತ್ತು ದಂಡ ವಿಧಿಸಿ, ಸಂತ್ರಸ್ತೆಗೆ 25 ಸಾವಿರ ರೂ. ಪರಿಹಾರ ಮೊತ್ತ ನೀಡುವಂತೆ ಆದೇಶ ನೀಡಿದರು.

ಸರಕಾರದ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ ವಾದಿಸಿದ್ದರು. ಬಳಿಕ ಅಪರಾಧಿಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರವಾರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. ಆತ ಬಂಧಿತ ದಿನದಿಂದ ಈವರೆಗೆ ನ್ಯಾಯಾಂಗ ಬಂಧನದಲ್ಲಿದ್ದನು.

ಅದೇ ದಿನ ಇನ್ನೊಬ್ಬಳ ಮಾನಭಂಗಕ್ಕೆ ಯತ್ನ !

ಜೀವಾವಧಿ ಶಿಕ್ಷೆಗೆ ಗುರಿಯಾದ  ಪ್ರದೀಪ್ ಪೂಜಾರಿ ಅದೇ ದಿನ ಮತ್ತೊಬ್ಬ ಬಾಲಕಿಯ ಮಾನಭಂಗಕ್ಕೂ ಯತ್ನಿಸಿದ್ದನು. ಈ ಬಗ್ಗೆ ಆತನ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಇದೀಗ ವಿಚಾರಣೆ ನಡೆಯುತ್ತಿದೆ.

ದಲಿತ ಯುವತಿಯ ಅತ್ಯಾಚಾರ ನಡೆಸುವ ಕೆಲವು ನಿಮಿಷಗಳ ಮೊದಲು  ಪ್ರದೀಪ್ ಪೂಜಾರಿ ಅದೇ ದಾರಿಯಲ್ಲಿ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ  17 ವರ್ಷ ವಯಸ್ಸಿನ ಬಾಲಕಿಯನ್ನು ತಡೆದು ನಿಲ್ಲಿಸಿ ಪ್ರೀತಿಸುವುದಾಗಿ ಹೇಳಿಕೊಂಡಿದ್ದನು. ಇದನ್ನು ನಿರಾಕರಿಸಿದ ಬಾಲಕಿಯ ಕೆನ್ನೆಗೆ ಬಾರಿಸಿದ ಆತ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದನು. ಈ ವೇಳೆ ಆಕೆ ಆತನಿಂದ ತಪ್ಪಿಸಿ ಓಡಿ ಹೋಗಿದ್ದಳು.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ನಿಗದಿ ಪಡಿಸುವ ದಿನಾಂಕವನ್ನು ಮಾ. 29ಕ್ಕೆ ಮುಂದೂಡಿದೆ. ಸರಕಾರದ ಪರ ವಿಶೇಷ ಅಭಿಯೋಜಕ ವಿಜಯ ಪೂಜಾರಿ ವಾದಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X