Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ:...

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ: 100 ಶಾಲೆಗಳಿಗೆ ಪಾರಂಪಾರಿಕ ಶಾಲೆ ಬಿರುದು

ರಾಜ್ಯ ಬಜೆಟ್-2018

ವಾರ್ತಾಭಾರತಿವಾರ್ತಾಭಾರತಿ16 Feb 2018 10:11 PM IST
share
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ: 100 ಶಾಲೆಗಳಿಗೆ ಪಾರಂಪಾರಿಕ ಶಾಲೆ ಬಿರುದು

ಬೆಂಗಳೂರು, ಫೆ.16: ರಾಜ್ಯದಲ್ಲಿ 100 ವರ್ಷಗಳನ್ನು ಪೂರೈಸುತ್ತಿರುವ 100 ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ‘ಪಾರಂಪಾರಿಕ ಶಾಲೆ’ಗಳೆಂದು ಗುರುತಿಸಿ ಅವುಗಳನ್ನು ಹಂತ ಹಂತವಾಗಿ ನವೀಕರಿಸಿ ಸಂರಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

* ಒಂದೇ ಸೂರಿನಡಿ ವಿದ್ಯಾಭ್ಯಾಸ ಕಲ್ಪಿಸಿ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಲು ಪ್ರಸಕ್ತ ವರ್ಷದಲ್ಲಿ ಗ್ರಾಮ ಪಂಚಾಯತ್ ಕೇಂದ್ರ ಸ್ಥಾನದಲ್ಲಿ 12 ನೆ ತರಗತಿಯವರೆಗೂ 176 ಸಂಯೋಜಿತ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

* 2018-19 ನೆ ಸಾಲಿನಲ್ಲಿ 100 ಸಂಯೋಜಿತ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು ಪ್ರತಿ ಶಾಲೆಗೆ 5 ಲಕ್ಷ ರೂ.ಗಳಂತೆ ಪ್ರಾರಂಭಿಸಲಾಗುತ್ತದೆ. ಅಲ್ಲದೆ, ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿಶ್ವ ಭ್ರಾತೃತ್ವ ಸೇವಾ ಮನೋಭಾವ, ಶಾಂತಿ, ಶಿಸ್ತು, ಸಂಯಮ ಜೊತೆಗೆ ಮಾನವೀಯ ವೌಲ್ಯಗಳನ್ನು ಬೆಳೆಸಲು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಘಟನಗಳನ್ನು ಪ್ರಾರಂಭಿಸಲಾಗುತ್ತಿದೆ.

* ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯು ಸರಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಂತ ಹಂತವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

 * ರಾಜ್ಯ ಕೇಂದ್ರ ಗ್ರಂಥಾಲಯಗಳ ಶತಮಾನೋತ್ಸವ ಸ್ಮರಣಾರ್ಥವಾಗಿ ಜಿಲ್ಲಾ, ನಗರ ಮತ್ತು ತಾಲೂಕು ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಪ್ರಥಮ ಬಾರಿಗೆ ಅಂತರ್ಜಾಲದ ಕ್ಲೌಡ್ ಮೂಲಕ ರಾಜ್ಯದಲ್ಲಿರುವ ಸರಕಾರಿ ಪ್ರೌಢ ಶಾಲೆಗಳಿಗೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸಂಪರ್ಕ ನೀಡಿ ಅಂದಾಜು 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯ ಒದಗಿಸಲಾಗುವುದು. ಈ ಉದ್ದೇಶಕ್ಕೆ 5 ಕೋಟಿ ರೂ.ಗಳನ್ನು ಒದಗಿಸಿದೆ.

* ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪ್ರತಿ ತಾಲೂಕಿನ ಒಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ(ಎಸ್‌ಡಿಎಂಸಿ) ಅತ್ಯತ್ತಮ ಎಸ್‌ಡಿಎಂಸಿ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಿದೆ.

* ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಎಲ್ಲ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ಸಮಿತಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಅಗಸ್ತ್ಯ ಫೌಂಡೇಷನ್ ಸಹಭಾಗಿತ್ವದೊಂದಿಗೆ ಎಲ್ಲ ಜಿಲ್ಲೆಗಳಲ್ಲಿ 7.5 ಕೋಟಿ ರೂ.ಗಳ ವೆಚ್ಚದಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು.

* 2018-19 ನೆ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22, 350 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X